ಸಮಗ್ರ ನ್ಯೂಸ್: 3 ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ವೈಟ್ ವಾಶ್ ಮಾಡಿರುವ ಟೀಂ ಇಂಡಿಯಾ ಏಕದಿನ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದೆ.
ಹೈದರಾಬಾದ್, ರಾಯ್‌ಪುರ ನಂತರ ಇಂದೋರ್‌ನಲ್ಲೂ ರೋಹಿತ್ ಶರ್ಮಾ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದೆ. ಮೂರನೇ ಏಕದಿನ ಪಂದ್ಯವನ್ನು 90 ರನ್‌ಗಳಿಂದ ಗೆದ್ದುಕೊಂಡ ಭಾರತ ಈ ಗೆಲುವಿನೊಂದಿಗೆ ಸರಣಿಯಲ್ಲೂ ಕ್ಲೀನ್ ಸ್ವೀಪ್ ಮಾಡಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಅವರ ಅಬ್ಬರದ ಶತಕದ ನೆರವಿನಿಂದಾಗಿ 386 ರನ್‌ಗಳ ಬೃಹತ್ ಗುರಿ ಸೆಟ್ ಮಾಡಿತು. ಇದಕ್ಕುತ್ತರವಾಗಿ ಭಾರತದ ದಾಳಿಯ ಮುಂದೆ ತತ್ತರಿಸಿದ ಕಿವೀಸ್ ತಂಡ 41.2 ಓವರ್ಗಳಲ್ಲಿ 295 ರನ್ಗಳಿಗೆ ಆಲೌಟಾಯಿತು.
ಇದರೊಂದಿಗೆ ಭಾರತ ಏಕದಿನ ಕ್ರಿಕೆಟ್‌ನಲ್ಲಿ ವಿಶ್ವದ ನಂಬರ್ ಒನ್ ತಂಡ ಎನಿಸಿಕೊಂಡಿದೆ. ಮೊದಲು ಬ್ಯಾಟಿಂಗ್ನಲ್ಲಿ ರೋಹಿತ್ ಹಾಗೂ ಶುಭ್ಮನ್ ಶತಕ ಸಿಡಿಸಿದರೆ, ನಂತರ ಬೌಲಿಂಗ್ನಲ್ಲಿ ಮ್ಯಾಜಿಕ್ ಮಾಡಿದ ಶಾರ್ದೂಲ್ ಠಾಕೂರ್ ಮತ್ತು ಕುಲ್ದೀಪ್ ಯಾದವ್ ಈ ಪಂದ್ಯದ ಹೀರೋಗಳಾದರು. ಅಲ್ಲದೆ ಈ ಗೆಲುವಿನೊಂದಿಗೆ ಬರೋಬ್ಬರಿ 13 ವರ್ಷಗಳ ಬಳಿಕ ಮೊದಲ ಬಾರಿಗೆ ಭಾರತ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಮಾಡಿದ ಸಾಧನೆಯನ್ನೂ ಮಾಡಿದೆ.