Ad Widget .

ನಿಮ್ಮನ್ನು ನಂಬಿ ಇನ್ನೂ ಕೋರ್ಟ್ ಗೆ ಅಲೆಯುತ್ತಿದ್ದೇವೆ| ಪರೇಶ್ ಮೇಸ್ತಾ ಪ್ರಕರಣ ಸಂಬಂಧ ತಿರುಗಿ ಬಿದ್ದ ಹಿಂದೂ ಕಾರ್ಯಕರ್ತರು

ಸಮಗ್ರ ನ್ಯೂಸ್: ಹಿಂದೂ ಕಾರ್ಯಕರ್ತ ಪರೇಶ್‌ ಮೇಸ್ತಾ ಸಾವು ಪ್ರಕರಣಕ್ಕೆ ಸಿಬಿಐ ಬಿ ರಿಪೋರ್ಟ್‌ ಸಲ್ಲಿಸಿದ್ದರೂ ಅದರ ಕಾವು ಮಾತ್ರ ಇನ್ನೂ ಆರಿಲ್ಲ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಇನ್ನೂ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದು, ಈಗ ಕುಮಟಾ ಶಾಸಕ ದಿನಕರ ಶೆಟ್ಟಿ ವಿರುದ್ಧ ತಿರುಗಿಬಿದ್ದಿದ್ದಾರೆ.

Ad Widget . Ad Widget .

ಹೊನ್ನಾವರದ ಶರಾವತಿ ಸರ್ಕಲ್‌ನಲ್ಲಿ‌ ಸೇರಿದ ಹಿಂದು ಕಾರ್ಯಕರ್ತರು, ಬಿಜೆಪಿ ವಿರುದ್ಧ ತೀವ್ರ ಆಕ್ರೋಶವನ್ನು ಹೊರಹಾಕಿದ್ದಾರೆ. ಇಲ್ಲಿನ ಮೀನುಗಾರರು, ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ ವಿವಿಧ ಧರ್ಮದ, ಜಾತಿಗಳ ಯುವಕರು ಕಳೆದ ಐದು ವರ್ಷಗಳಿಂದ ಕೋರ್ಟ್‌ಗೆ ಅಲೆದಾಡುತ್ತಲೇ ಇದ್ದೇವೆ. ಹಿಂದುತ್ವ ಎಂದು ನಮ್ಮನ್ನು ಹುರಿದುಂಬಿಸಿ ಕೊನೆಗೆ ನಮ್ಮನ್ನು ಕೈಬಿಟ್ಟಿದ್ದಾರೆ. ಬಿಜೆಪಿ ಅಧಿಕಾರವನ್ನು ಅನುಭವಿಸಿ ನಮಗೆ ಏನು ಮಾಡಿದ್ದೀರಿ? ನಿಮಗೆ ಬೇಕಾದವರ ಕೇಸ್‌ಗಳನ್ನು ವಜಾ ಮಾಡಿಸಿಕೊಂಡಿರಿ, ಆದರೆ, ನಾವು ಮಾತ್ರ ಕೋರ್ಟ್‌ಗೆ ಇಂದಿನವರೆಗೂ ಅಲೆದಾಡುತ್ತಿದ್ದೇವೆ. ಒಬ್ಬ ಬಿಜೆಪಿ ನಾಯಕರು ನಮ್ಮ ಸಮಸ್ಯೆಯನ್ನು ಆಲಿಸಲು ಬಂದಿದ್ದೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

Ad Widget . Ad Widget .

ಪರೇಶ್‌ ಮೇಸ್ತಾ ಸಾವಿನ ಪ್ರಕರಣದಲ್ಲಿ 95 ಮಂದಿ ಮೇಲೆ ದೂರು ದಾಖಲಾಗಿತ್ತು. ಶಾಸಕ ದಿನಕರ ಶೆಟ್ಟಿ ಮೇಲೂ ಸಹ ದೂರು ದಾಖಲಾಗಿತ್ತು. ಆದರೆ, ನಮಗೆ ಓಡಾಡಲು ಸಮಸ್ಯೆಯಾಗುತ್ತಿದೆ. ನಿಮ್ಮನ್ನು ನಂಬಿ ಸಮಸ್ಯೆಗೆ ಸಿಲುಕಿದ್ದೇವೆ. ಕಾಂಗ್ರೆಸ್‌ ಪಕ್ಷವನ್ನೂ ಸಹ ವಿರೋಧ ಕಟ್ಟಿಕೊಂಡಿದ್ದೇವೆ. ಆದರೆ, ನಮ್ಮ ರಕ್ಷಣೆಗೆ ಮಾತ್ರ ಯಾರೂ ಬರುತ್ತಿಲ್ಲ ಎಂದು ಹಿಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

2017ರ ಡಿಸೆಂಬರ್ 6ರಂದು ನಾಪತ್ತೆಯಾಗಿದ್ದ ಯುವಕ ಪರೇಶ್ ಮೇಸ್ತಾ, ಡಿಸೆಂಬರ್ 8ರಂದು ಹೊನ್ನಾವರದ ಶೆಟ್ಟಿಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಆದರೆ, ಆತನ ಮೃತ ದೇಹವು ಗಾಯಗೊಂಡ ಸ್ಥಿತಿಯಲ್ಲಿದ್ದರಿಂದ ಇದನ್ನು ಕೊಲೆ ಎಂದು ಭಾವಿಸಲಾಗಿತ್ತು. ಅನ್ಯ ಕೋಮಿನ ಯುವಕರು ಕೊಲೆ ಮಾಡಿ ಹಾಕಿದ್ದಾರೆಂದು ಶಂಕೆ ವ್ಯಕ್ತವಾಗಿ ಸಾಕಷ್ಟು ಪ್ರತಿಭಟನೆ, ಹೋರಾಟಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಪರೇಶ್‌ ಮೇಸ್ತಾ ಆಕಸ್ಮಿಕ ಸಾವು ಎಂದು ಸಿಬಿಐ ವರದಿ ನೀಡಿದ್ದ ಬೆನ್ನಲ್ಲೇ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ಪ್ರಕರಣ ಬೇರೆಯೇ ಇದ್ದು, ಸಿಬಿಐ ಮರು ತನಿಖೆ ನಡೆಸಬೇಕು. ಈ ಬಗ್ಗೆ ತಾವು ಈಗಾಗಲೇ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿದ್ದಾಗಿ ಹೇಳಿಕೆ ನೀಡಿದ್ದರು. ಇದಾದ ಬಳಿಕ ಅನೇಕ ಬಿಜೆಪಿ ಮುಖಂಡರು ಸಿಬಿಐ ವರದಿಯನ್ನು ಅಲ್ಲಗಳೆದಿದ್ದರು. ಆದರೆ, ಕಾಂಗ್ರೆಸ್‌ ಈ ವರದಿಯನ್ನು ಸ್ವಾಗತ ಮಾಡಿತ್ತು. ಬಿಜೆಪಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ ಎಂಬ ಆರೋಪವನ್ನೂ ಮಾಡಿತ್ತು.

Leave a Comment

Your email address will not be published. Required fields are marked *