Ad Widget .

ಸುಬ್ರಹ್ಮಣ್ಯ: ಮರದಿಂದ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರಾಮಪತ್ರೆ ಕೊಯ್ಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕಡಬ ತಾಲೂಕಿನ ಬಳ್ಪದಲ್ಲಿ ನಡೆದಿದೆ. ಇಲ್ಲಿನ ಬಳ್ಪ ಗ್ರಾಮದ ಕುಂಜತ್ತಾಡಿ ಮನೆ ದಾಮೋದರ ಗೌಡ (57) ಮೃತ ದುರ್ದೈವಿ.

Ad Widget . Ad Widget .

ಇವರು ಮನೆಯ ಬಳಿಯಿದ್ದ ರಾಮಪತ್ರೆ ಕೊಯ್ಯಲು ಮರವನ್ನು ಹತ್ತಿ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಅಂಬುಲೆನ್ಸ್ ಮೂಲಕ ಕಡಬ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತು.

Ad Widget . Ad Widget .

ಈ ವೇಳೆ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿ ತಿಳಿದು ಬಂದಿದೆ . ಈ ಬಗ್ಗೆ ಮೃತರ ಪತ್ನಿರುಕ್ಮಿಣಿ ಅವರು ನೀಡಿದ ದೂರಿನಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *