Ad Widget .

ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧ – ಸಿ.ಟಿ‌ ರವಿ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಿಣಿ, ಜೆಡಿಎಸ್ ನಾಯಕ ಎಚ್​.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್ ಕೊಡಲು ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

Ad Widget . Ad Widget .

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ ರವಿ, ನಾನು ಸಹೋದರಿ ಭವಾನಿಯವರ ಹೇಳಿಕೆಯನ್ನು ಗಮನಿಸಿದ್ದೇನೆ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾನು ಮನೆಯಲ್ಲಿ ಗಲಾಟೆಯನ್ನು ಹಚ್ಚಿಸಲು ಬಯಸುವುದಿಲ್ಲ. ನನ್ನ ಮನಸ್ಸಿನಲ್ಲಿ ಭವಾನಿ ಅಕ್ಕ ನಮ್ಮ ಪಕ್ಷದಿಂದ ಅಭ್ಯರ್ಥಿಯಾಗಬೇಕು ಎನ್ನುವುದು ಎನ್ನುವ ಅಚ್ಚರಿ ಹೇಳಿಕೆ ನೀಡಿದ್ದಾರೆ.

Ad Widget . Ad Widget .

ಭವಾನಿ ಹೊಳೆನರಸೀಪುರದಿಂದ ನಮ್ಮ ಪಕ್ಷದಿಂದ ಅಭ್ಯರ್ಥಿಯಾಗಲಿ ಭವಾನಿ ಅವರಿಗಿಂದ ಉತ್ತಮ ಅಭ್ಯರ್ಥಿ ಹೊಳೆನರಸೀಪುರಕ್ಕೆ ಬೇರೊಬ್ಬರಿಲ್ಲ. ಹಾಸನ‌ ಜಿಲ್ಲೆ‌ಯ ರಾಜಕಾರಣವನ್ನು ಹತ್ತಿರದಿಂದ ಗಮನಿಸಿದ್ದೇನೆ. ಆದರೆ ರೇವಣ್ಣ ಮತ್ತು ಭವಾನಿ ಅವರ ನಡುವೆ ಜಗಳ ಹಚ್ಚುವ ಕೆಲಸ ಮಾಡಲು ನನಗೆ ಇಷ್ಟವಿಲ್ಲ ಎಂದರು.

Leave a Comment

Your email address will not be published. Required fields are marked *