Ad Widget .

ಜೀವದ ಹಂಗು ತೊರೆದು ಇಬ್ಬರು ಹೆಣ್ಣು ಮಕ್ಕಳ ರಕ್ಷಿಸಿದ KSRTC ಚಾಲಕ|

ಸಮಗ್ರ ನ್ಯೂಸ್: KSRTC ಬಸ್​​ ಚಾಲಕನೋರ್ವ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಶಿರಾ- ನಾಗಪ್ಪನಹಳ್ಳಿ ಗೇಟ್ ಬಳಿ ನಡೆದಿದೆ.

Ad Widget . Ad Widget .

ಕೆಎಸ್​​ಆರ್​​ಟಿಸಿ ಬಸ್​​ ಚಾಲಕ ಮಂಜುನಾಥ್​​ ಎಂಬುವವರು ಶಿರಾದಿಂದ ನಾಗಪ್ಪನಹಳ್ಳಿ ಗೇಟ್ ಮಾರ್ಗವಾಗಿ ಬರುತ್ತಿದ್ದಾಗ ಹಂದಿಕುಂಟೆ ಅಗ್ರಹಾರ ಕೆರೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಮುಳುಗುತ್ತಿರುವುದನ್ನು ಗಮನಿಸಿದ್ದಾರೆ.

Ad Widget . Ad Widget .

ಕೂಡಲೇ ಎಚ್ಚೆತ್ತುಕೊಂಡ ಬಸ್​​ ಚಾಲಕ ತಮ್ಮ ಜೀವದ ಹಂಗನ್ನು ತೊರೆದು ಕೆರೆಗೆ ಧುಮುಕಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.

ಇನ್ನು ಚಾಲಕನ ಮಾನವೀಯ ಸಮಯೋಚಿತ ಕಾರ್ಯದಿಂದ ಇಬ್ಬರು ಹೆಣ್ಣು ಮಕ್ಕಳ ಪ್ರಾಣ ಉಳಿದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಚಾಲಕನ ಈ ಕೆಲಸಕ್ಕೆ ವ್ಯವಸ್ಥಾಪಕ ನಿರ್ದೇಶಕರು ಮನತುಂಬಿ ಹಾರೈಸಿದ್ದಾರೆ. ಇವರ ಮಾದರಿ ಕಾರ್ಯ ಅನನ್ಯವೆಂದು ಬಣ್ಣಿಸಿದ್ದಾರೆ.

ನಮ್ಮ ಸಿಬ್ಬಂದಿಗಳ ಈ ಕಾರ್ಯತತ್ಪರತೆ ಸಂಸ್ಥೆಗೆ ಹೆಮ್ಮೆ ಮತ್ತು ಗೌರವ ತಂದು ಕೊಟ್ಟಿದೆ. ಇಂತಹ ಸಿಬ್ಬಂದಿಗಳೇ ನಮ್ಮ ಆಸ್ತಿ ಎಂದು ವ್ಯವಸ್ಥಾಪಕ ನಿರ್ದೇಶಕರು ಮನಃಪೂರ್ವಕವಾಗಿ ಹೊಗಳಿದ್ದಾರೆ.

Leave a Comment

Your email address will not be published. Required fields are marked *