January 2023

ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ ತಯಾರಿಸಿದ ಜ್ಯುವೆಲ್ಲರಿ ಅಂಗಡಿಯ ಮಾಲೀಕ

ಸೂರತ್‌: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್‌ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್‌ ಚಿನ್ನದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ. “ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್‌ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 ಗ್ರಾಂ ತೂಕದ ಅವರ ಪ್ರತಿಮೆಯನ್ನು ತಯಾರಿಸಲಾಗಿದೆ. ನಮ್ಮ ಕಾರ್ಖಾನೆಯಲ್ಲಿ 20 […]

ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ ತಯಾರಿಸಿದ ಜ್ಯುವೆಲ್ಲರಿ ಅಂಗಡಿಯ ಮಾಲೀಕ Read More »

ಕಾಸರಗೋಡು: ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ವಿವಿಧ ಧರ್ಮಗಳಿಗೆ ಸೇರಿದ ಜೋಡಿಯೊಂದು ಕಾಸರಗೋಡಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಕೆ.ಎಂ. ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36) ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ರಾಜಾಪುರ ಪೊಲೀಸರು ಜೋಡಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ.

ಕಾಸರಗೋಡು: ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ ವಿಧಿಸಲಾಗಿದೆ. ಚಲಿಸುತ್ತಿದ್ದ ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸದಿದ್ದಕ್ಕೆ ರಿಷಿ ಸುನಾಕ್ ಅವರಿಗೆ 100 ಪೌಂಡ್ ದಂಡವನ್ನು ವಿಧಿಸಲಾಗಿದೆ ಎಂದು ಲಂಕಾಶೈರ್ ಪೊಲೀಸರು ತಿಳಿಸಿದ್ದಾರೆ. ಲಂಕಾಶೈರ್‌ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸೀಟ್‌ಬೆಲ್ಟ್ ಧರಿಸದೇ ಇರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಬಳಿಕ ನಾವು ಶುಕ್ರವಾರ ಲಂಡನ್‌ನ 42 ವರ್ಷದ ವ್ಯಕ್ತಿಗೆ ಷರತ್ತುಬದ್ಧವಾಗಿ ದಂಡ ವಿಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಸುನಾಕ್ ಇಂಗ್ಲೆಂಡ್‌ನ

ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ Read More »

ಸಂಬಂಧವಿಲ್ಲದ ವ್ಯಕ್ತಿಗಳು ಹೈಕೋರ್ಟ್‌ನ ಹಾಲ್‌ಗಳಿಗೆ ಪ್ರವೇಶಿಸಿದರೆ ನೇರವಾಗಿ ಜೈಲಿಗೆ ಕಳುಹಿಸಿ:ಹೈಕೋರ್ಟ್‌

ಸಮಗ್ರ ನ್ಯೂಸ್: ‘ವಿನಾಕಾರಣ ಮತ್ತು ಸಂಬಂಧವಿಲ್ಲದ ವ್ಯಕ್ತಿಗಳು ಹೈಕೋರ್ಟ್‌ನ ಹಾಲ್‌ಗಳಿಗೆ ಪ್ರವೇಶಿಸಿದರೆ ಅಂತಹವರನ್ನು ಬಂಧಿಸಿ ನೇರವಾಗಿ ಜೈಲಿಗೆ ಕಳುಹಿಸಲಾಗುವುದು’ ಎಂದು ಹೈಕೋರ್ಟ್‌ ಕಠಿಣವಾದ ಮೌಖಿಕ ಎಚ್ಚರಿಕೆ ನೀಡಿದೆ. ‘ವಕೀಲರು, ಕಾನೂನು ವಿದ್ಯಾರ್ಥಿಗಳು, ಕೇಸಿಗೆ ಸಂಬಂಧಿಸಿದ ಕಕ್ಷಿದಾರರು, ಅಧಿಕಾರಿಗಳು ಹಾಗೂ ಸಕಾರಣ ಹೊಂದಿದ ವ್ಯಕ್ತಿಗಳಿಗೆ ಮಾತ್ರವೇ ಕೋರ್ಟ್‌ ಹಾಲ್‌ ಪ್ರವೇಶ ಇರುತ್ತದೆ’ ಎಂದು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಹೇಳಿದೆ. ಸಚಿವ ಮುನಿರತ್ನ ವಿರುದ್ಧ ವಿಧಾನಪರಿಷತ್‌ ಸದಸ್ಯ ತುಳಸಿ ಮುನಿರಾಜು ಗೌಡ ದಾಖಲಿಸಿರುವ ಚುನಾವಣಾ ಅಕ್ರಮ

ಸಂಬಂಧವಿಲ್ಲದ ವ್ಯಕ್ತಿಗಳು ಹೈಕೋರ್ಟ್‌ನ ಹಾಲ್‌ಗಳಿಗೆ ಪ್ರವೇಶಿಸಿದರೆ ನೇರವಾಗಿ ಜೈಲಿಗೆ ಕಳುಹಿಸಿ:ಹೈಕೋರ್ಟ್‌ Read More »

ಜೆಡಿಎಸ್ ಗೆ ಬಿಗ್ ಶಾಕ್| ಸಿಂದಗಿ ಕ್ಷೇತ್ರದ ಘೋಷಿತ ಅಭ್ಯರ್ಥಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ (54) ಹೃದಯಾಘಾತದಿಂದ ಶನಿವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಕಳೆದ ರಾತ್ರಿ‌ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರ ಪ್ರಕಟಿಸಿದ್ದಾರೆ. ನಾಗಠಾಣ ಕ್ಷೇತ್ರದಲ್ಲಿ ‌ನಡೆದ ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌

ಜೆಡಿಎಸ್ ಗೆ ಬಿಗ್ ಶಾಕ್| ಸಿಂದಗಿ ಕ್ಷೇತ್ರದ ಘೋಷಿತ ಅಭ್ಯರ್ಥಿ ಹೃದಯಾಘಾತದಿಂದ ಸಾವು Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳನ್ನು ಉಲ್ಲೇಖೀಸಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಮಂದಿಗಾಗಿ ಹುಡುಕಾಟ ನಡೆದಿದೆ. ಎನ್‌ಐಎ ಪರ ವಕೀಲರಾದ ಪಿ. ಪ್ರಸನ್ನ ಕುಮಾರ್‌ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಈ ನಡುವೆ ಪ್ರಕರಣದ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಎನ್ಐಎ ನಿಂದ 1500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ Read More »

ತುಮಕೂರು: ಇಂದು (ಜ.21) ಶಿವಕುಮಾರ ಸ್ವಾಮಿಗಳ ನಾಲ್ಕನೇ ಪುಣ್ಯಸ್ಮರಣೆ

ಸಮಗ್ರ ನ್ಯೂಸ್: ತುಮಕೂರು ಸಿದ್ದಗಂಗಾ ಮಠದ ದಿ. ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ

ತುಮಕೂರು: ಇಂದು (ಜ.21) ಶಿವಕುಮಾರ ಸ್ವಾಮಿಗಳ ನಾಲ್ಕನೇ ಪುಣ್ಯಸ್ಮರಣೆ Read More »

ನೀರಿನ ಟ್ಯಾಂಕ್ ಗೆ ಬಿದ್ದು ವಾಟರ್ ಮ್ಯಾನ್ ಸಾವು

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್ ನ ವಾಟರ್ ಮ್ಯಾನ್ ಕೆಲಸ ನಿರ್ವಹಿಸುತ್ತಿರುವ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಕುಡಿಯುವ ನೀರಿನ ಟ್ಯಾಂಕ್ ಒಳಗಡೆ ಬಿದ್ದು ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಿಂದ ವರದಿಯಾಗಿದೆ. ಯು.ಚೆಂಬು ಗ್ರಾಮದ ಮಾರ್ಪಡ್ಕ ನಿವಾಸಿ ಬೊಳುಗಲ್ಲು ಆನಂದ ರವರ ಪುತ್ರ ನಿತಿನ್ (26) ಮೃತಪಟ್ಟ ದುರ್ದೈವಿ. ಈತ ಪಂಚಾಯತ್ ಟ್ಯಾಂಕ್ ನಿಂದ ನೀರು ಬಿಡಲು ತೆರಳಿದ್ದು, ಬಾರದೇ ಇದ್ದುದರಿಂದ ಅನುಮಾನಗೊಂಡು ಹುಡುಕಿಕೊಂಡು ಹೋದ ವೇಳೆ ಘಟನೆ ಬೆಳಕಿಗೆ ಬಂದಿದೆ. ಮೃತರು ತಂದೆ,ತಾಯಿ,ಹಾಗೂ

ನೀರಿನ ಟ್ಯಾಂಕ್ ಗೆ ಬಿದ್ದು ವಾಟರ್ ಮ್ಯಾನ್ ಸಾವು Read More »

ಸೋಲಿಲ್ಲದ ಸರದಾರ, ಸಚಿವ ಎಸ್.ಅಂಗಾರ ರಾಜಕೀಯಕ್ಕೆ ಹೇಳ್ತಾರಾ ಗುಡ್ ಬೈ? ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಹೊಸಬರಿಗೆ ಬಿಜೆಪಿ ಮಣೆ?

ಸಮಗ್ರ ನ್ಯೂಸ್: ರಾಜ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಭದ್ರಕೋಟೆ ಎನಿಸಿರುವ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸ ರಾಜಕೀಯ ಸಂಚಲನ ಉಂಟಾಗಿದೆ. ಸೋಲನ್ನೇ ಅರಿಯದ, ಆರು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿರುವ ಎಸ್.ಅಂಗಾರ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂಬ ಸುದ್ದಿಯೊಂದು ಗುಲ್ಲೆಬ್ಬಿಸಿದೆ. ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಯಾರಿ ಮಾಡಿಕೊಂಡಿದೆ. ಪ್ರತಿಯೊಂದು ಕ್ಷೇತ್ರದಲ್ಲೂ, ಪತ್ರೀ ಪಕ್ಷಕ್ಕೂ ಅಭ್ಯರ್ಥಿಗಳ ಆಯ್ಕೆ ಮತ್ತು ಗೆಲುವು ಕೂಡ ಬಹಳ

ಸೋಲಿಲ್ಲದ ಸರದಾರ, ಸಚಿವ ಎಸ್.ಅಂಗಾರ ರಾಜಕೀಯಕ್ಕೆ ಹೇಳ್ತಾರಾ ಗುಡ್ ಬೈ? ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಹೊಸಬರಿಗೆ ಬಿಜೆಪಿ ಮಣೆ? Read More »

ಓವರ್ ಲೋಡ್ ನಿಂದ ಮುಳುಗಿದ ಮೋಟಾರ್ ಬೋಟ್| 145 ಮಂದಿ ಜಲಸಮಾದಿ

ಸಮಗ್ರ ನ್ಯೂಸ್: 200 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮೋಟಾರ್ ಬೋಟ್ ಓವರ್ ಲೋಡ್ ನಿಂದಾಗಿ ಮುಳುಗಡೆಯಾದ ಘಟನೆ ಕಾಂಗೋ ದೇಶದ ಲುಲೋಂಗಾ ನದಿಯಲ್ಲಿ ನಡೆದಿದೆ .ಈ ಅವಘಡದಲ್ಲಿ 145 ಮಂದಿ ಸಾವನ್ನಪ್ಪಿದ್ದು, ಉಳಿದ 55 ಮಂದಿ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲರೂ ತಮ್ಮ ಸರಕು ಮತ್ತು ಜಾನುವಾರುಗಳೊಂದಿಗೆ ರಿಪಬ್ಲಿಕ್ ಆಫ್ ಕಾಂಗೋಗೆ ತೆರಳುತ್ತಿದ್ದಾಗ ಬಸಾಂಕುಸು ಪಟ್ಟಣದ ಬಳಿ ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದೆ. ಪ್ರಯಾಣಿಕರು, ಸರಕುಗಳು ಮತ್ತು ಜಾನುವಾರುಗಳು ತುಂಬಿದ್ದ ದೋಣಿ ನದಿಯಲ್ಲಿ ಮುಳುಗಿದೆ.

ಓವರ್ ಲೋಡ್ ನಿಂದ ಮುಳುಗಿದ ಮೋಟಾರ್ ಬೋಟ್| 145 ಮಂದಿ ಜಲಸಮಾದಿ Read More »