January 2023

ಉಡುಪಿ: ಲಾರಿ-ಬೈಕ್ ನಡುವೆ ಡಿಕ್ಕಿ| ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು

ಸಮಗ್ರ ನ್ಯೂಸ್: ಲಾರಿ ಹಾಗೂ ಬೈಕ್ ಮಧ್ಯೆ ಉಡುಪಿಯ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೋಟದ ಸಮಿತ್ ಕುಮಾರ್ ಹಾಗೂ ವಾಗೀಶ್ ಎಂದು ಗುರುತಿಸಲಾಗಿದೆ ಇವರು ಉಡುಪಿಯ ಪೂರ್ಣ ಪ್ರಜ್ಜ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕಿನಲ್ಲಿ ವಾಪಸ್ ಹೋಗುತ್ತಿದ್ದ ವೇಳೆ ಎದುರಿನಲ್ಲಿದ್ದ ಲಾರಿಯನ್ನು ಓವರ್ ಟೇಕ್ […]

ಉಡುಪಿ: ಲಾರಿ-ಬೈಕ್ ನಡುವೆ ಡಿಕ್ಕಿ| ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು Read More »

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ರಾ.ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

‘ಆತನ ಕುಟುಂಬ ವರ್ಷದೊಳಗೆ ಸರ್ವನಾಶವಾಗಲಿ’ | ದೇವರ ಕಾಣಿಕೆ ಹುಂಡಿಯಲ್ಲಿ ಸಿಕ್ತು ವಿಚಿತ್ರ ಬೇಡಿಕೆಯ ಪತ್ರ

ಸಮಗ್ರ ನ್ಯೂಸ್: ದೇವರ ಬಳಿ ನಾನಾ ಬಗೆಯ ಪ್ರಾರ್ಥನೆಗಳನ್ನು ಮಾಡಿ ಅದನ್ನು ಪತ್ರಗಳ ಮೂಲಕ ಕಾಣಿಕೆ ಹುಂಡಿಯಲ್ಲಿ ಹಾಕುವುದು ಸಾಮಾನ್ಯ. ಇದರಲ್ಲಿ ತಮ್ಮ ಅಭಿವೃದ್ಧಿಗೆ, ಪ್ರೇಮ ಸಮಸ್ಯೆ ನಿವಾರಣೆಗೆ ಸಂಬಂಧಿಸಿದ್ದೇ ಅನೇಕ ಪತ್ರಗಳಿರುತ್ತವೆ. ಆದರೆ, ಇಲ್ಲೋರ್ವ ಒಂದು ಕುಟುಂಬ ಸರ್ವನಾಶ ಆಗಲೆಂಬ ವಿಚಿತ್ರ, ಆಘಾತಕಾರಿ ಬೇಡಿಕೆಯನ್ನು ದೇವರಿಗೆ ಸಲ್ಲಿಸಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದಲ್ಲಿನ ಲಕ್ಷ್ಮೀ ನಾರಾಯಣ ದೇವಾಲಯದ ಹುಂಡಿ ಎಣಿಕೆ ನಡೆದಿದ್ದು ಈ ವೇಳೆ ಭಕ್ತರ ಕೋರಿಕೆ ಪತ್ರಗಳು ಸಿಕ್ಕಿದೆ. ಅದರಲ್ಲಿ, ಬಳ್ಳಾರಿ ಜಿಲ್ಲೆ ಎಂದು

‘ಆತನ ಕುಟುಂಬ ವರ್ಷದೊಳಗೆ ಸರ್ವನಾಶವಾಗಲಿ’ | ದೇವರ ಕಾಣಿಕೆ ಹುಂಡಿಯಲ್ಲಿ ಸಿಕ್ತು ವಿಚಿತ್ರ ಬೇಡಿಕೆಯ ಪತ್ರ Read More »

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹2000 – ಸಚಿವ ಆರ್.ಅಶೋಕ್

ಸಮಗ್ರ ನ್ಯೂಸ್: ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದ್ದಾರೆ. ಕಲಬುರಗಿ ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಂಗಳವಾರ ರಾತ್ರಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ ₹ 2000 ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹2000 – ಸಚಿವ ಆರ್.ಅಶೋಕ್ Read More »

ಪಾಕ್ ಕ್ರಿಕೆಟಿಗ ಬಾಬರ್ ಅಜಂ ವಿಡಿಯೋ ನಕಲಿ| ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ ಖಾತೆದಾರ

ಸಮಗ್ರ ನ್ಯೂಸ್: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಝಮ್ ಅವರ ‘ಸೆಕ್ಸ್ಟಿಂಗ್ ಹಗರಣ’ ಕ್ಕೆ ಮಹತ್ವದ ತಿರುವು ಸಿಕ್ಕಿದೆ. ಬಾಬರ್‌ ಅಝಮ್‌ ತನ್ನ ಸಹ ಆಟಗಾರನ ಗೆಳತಿಗೆ ಲೈಂಗಿಕ ವಿಷಯದ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿದ್ದ ಟ್ವಿಟರ್‌ ಖಾತೆದಾರರೇ ತಾನು ಮೋಜಿಗಾಗಿ ಈ ಟ್ವೀಟ್‌ ಮಾಡಿದ್ದೆ, ಇದಕ್ಕೆ ಯಾವುದೇ ಆಧಾರ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಝಮ್‌ ಕುರಿತು ಟ್ವೀಟ್‌ ಮಾಡಿದ್ದ ಟ್ವಿಟರ್‌ ಖಾತೆಯೇ ಒಂದು ವಿಡಂಬನಾತ್ಮಕ ಖಾತೆಯಾಗಿದ್ದು, ಇದು ನೀರವ್‌ ಮೋದಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿದೆ.

ಪಾಕ್ ಕ್ರಿಕೆಟಿಗ ಬಾಬರ್ ಅಜಂ ವಿಡಿಯೋ ನಕಲಿ| ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿದ ಖಾತೆದಾರ Read More »

ಸ್ಯಾಂಟ್ರೋ ರವಿಯನ್ನು ವಶಕ್ಕೆ ಪಡೆದ ಸಿಐಡಿ; ತನಿಖೆ ಮತ್ತಷ್ಟು ಚುರುಕು

ಸಮಗ್ರ ನ್ಯೂಸ್: ಸ್ಯಾಂಟ್ರೋ ರವಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿದ ಸಿಐಡಿ ಪೊಲೀಸರು, ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಬೆಳಗ್ಗೆ ಮೈಸೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಎದುರು ಪೊಲೀಸರು ಆರೋಪಿಯನ್ನು ಹಾಜರು ಪಡಿಸಿದರು. ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ನೀಡುವಂತೆ ಸರ್ಕಾರಿ ಅಭಿಯೋಜಕರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಸರ್ಕಾರಿ ವಕೀಲರ ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ಜ.30 ರವರೆಗೆ ಸಿಐಡಿ ವಶಕ್ಕೆ ನೀಡಲು ಆದೇಶ

ಸ್ಯಾಂಟ್ರೋ ರವಿಯನ್ನು ವಶಕ್ಕೆ ಪಡೆದ ಸಿಐಡಿ; ತನಿಖೆ ಮತ್ತಷ್ಟು ಚುರುಕು Read More »

ಸಿದ್ದರಾಮಯ್ಯ ಗುರಾಯಿಸಿ ನೋಡಿದ ನಿರೂಪಕಿ ಯಾರು ಗೊತ್ತಾ? ವೈರಲ್ ವಿಡಿಯೋ ಬಗ್ಗೆ ಆಕೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್​ ಆಗಿದೆ. ಫೇಸ್​ಬುಕ್​ ಸ್ಟೋರಿ, ವಾಟ್ಸಾಪ್​ ಸ್ಟೇಟಸ್ ಹಾಗೂ ಇನ್​ಸ್ಟಾಗ್ರಾಂ ಸ್ಟೋರಿ ಎಲ್ಲಿ ನೋಡಿದರು ಸಿದ್ದರಾಮಯ್ಯ ಅವರ ವಿಡಿಯೋ ವೈರಲ್​ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್​ ಮಹಿಳಾ ಸಮಾವೇಶದಲ್ಲಿ ವೇದಿಕೆ ಮೇಲಿಂದ ಕೆಳಗೆ ಇಳಿಯುವಾಗ ಸಿದ್ದರಾಮಯ್ಯ ಅವರು ಕಾರ್ಯಕ್ರಮ ನಿರೂಪಕಿಯನ್ನು ವಾರೆಗಣ್ಣಿಂದ ನೋಡಿದರು. ಹಾಗೇ ನಿರೂಪಕಿಯನ್ನು ನೋಡಿಕೊಂಡೇ ವೇದಿಕೆಯಿಂದ ಹೊರ ನಡೆದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದು,

ಸಿದ್ದರಾಮಯ್ಯ ಗುರಾಯಿಸಿ ನೋಡಿದ ನಿರೂಪಕಿ ಯಾರು ಗೊತ್ತಾ? ವೈರಲ್ ವಿಡಿಯೋ ಬಗ್ಗೆ ಆಕೆ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೈಲ್ಸ್… Read More »

ಸುಳ್ಯ: ಅರಂತೋಡು – ಅಡ್ತಲೆ – ಎಲಿಮಲೆ ರಸ್ತೆ ಕಾಮಗಾರಿ ಕೊನೆಗೂ ಆರಂಭ| ಸಚಿವರನ್ನು ನುಡಿದಂತೆ ನಡೆಸಿದ ನಾಗರಿಕ ಹಿತರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು, ಪ್ರತಿಷ್ಟೆಯ ಪ್ರಶ್ನೆಯಾಗಿದ್ದ, ಸಾರ್ವಜನಿಕರ ಬಹುಬೇಡಿಕೆಯ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು – ಅಡ್ತಲೆ – ಎಲಿಮಲೆ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿದೆ. ಈ ರಸ್ತೆ ಅಭಿವೃದ್ಧಿಗಾಗಿ ಹಲವು ವರ್ಷಗಳಿಂದ ಈ ಭಾಗದ ಸಾರ್ವಜನಿಕರು ಬೇಡಿಕೆ ಮುಂದಿಟ್ಟಿದ್ದರು. ಅರಂತೋಡು ನಾಗರಿಕ ಹಿತರಕ್ಷಣಾ ವೇದಿಕೆಯವರು ಹಲವು ಬಾರಿ ಶಾಸಕರಾದಿಯಾಗಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಅಲ್ಲದೆ ಕಳೆದ ಬಾರಿ‌ ಮತದಾನ ಬಹಿಷ್ಕಾರದ ಬ್ಯಾನರ್ ದಾರಿಯುದ್ದಕ್ಕೂ ಅಳವಡಿಸಲಾಗಿತ್ತು. ಇತ್ತೀಚೆಗೆ ಈ ರಸ್ತೆಯ

ಸುಳ್ಯ: ಅರಂತೋಡು – ಅಡ್ತಲೆ – ಎಲಿಮಲೆ ರಸ್ತೆ ಕಾಮಗಾರಿ ಕೊನೆಗೂ ಆರಂಭ| ಸಚಿವರನ್ನು ನುಡಿದಂತೆ ನಡೆಸಿದ ನಾಗರಿಕ ಹಿತರಕ್ಷಣಾ ವೇದಿಕೆ Read More »

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ| ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಪುತ್ತೂರುನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಮುಂಡೂರು ಕಂಪದ ದಿ.ಗುರುವ ಎಂಬವರ ಪುತ್ರಿ ಜಯಶ್ರೀ ಎಂಬಾಕೆಯನ್ನು ಜ.17ರಂದು ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಹಿನ್ನಲೆ ಸುಳ್ಯ ತಾಲೂಕಿನ ಕನಕಮಜಲಿನ ಉಮೇಶ ಎಂಬಾತನ ಕೃತ್ಯ ಎಂದು ಶಂಕೆ ವ್ಯಕ್ತವಾಗಿದ್ದು ಸಾವಿಗೀಡಾದ ಯುವತಿ ಮನೆಯವರು ಉಮೇಶ್ ಕನಕಮಜಲು ವಿರುದ್ದ ಸಂಶಯ ವ್ಯಕ್ತ ಪಡಿಸಿ ದೂರು ನೀಡಿದ್ದಾರೆ. ಈ ಪ್ರಕರ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ತನಿಖೆ ಮುಂದುವರಿದಿದೆ. ದೂರಿನಲ್ಲಿ

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ| ಸುಳ್ಯದ ವ್ಯಕ್ತಿಯ ವಿರುದ್ಧ ದೂರು ದಾಖಲು Read More »

ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಿಯಕರನ ಬಂಧನ

ಸಮಗ್ರ ನ್ಯೂಸ್: ಪ್ರೇಮ ವೈಫಲ್ಯದಿಂದ ಮನನೊಂದು ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿತೇಶ್ ನನ್ನು ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನಿತೇಶ್ ನನ್ನು ತರುಣಿ ಪ್ರೀತಿಸುತ್ತಿದ್ದಳು.ಪ್ರೇಮಿಗಳ ಮಧ್ಯೆ ಜಗಳವಾಗಿ ಜನವರಿ 10ರಂದು ಆಕೆ ವಿಷ ಸೇವಿಸಿದ್ದಳು. ನಾಲ್ಕು ದಿನಗಳ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಕೆ ಸಾವನ್ನಪ್ಪಿದ್ದಳು. ವಿದ್ಯಾರ್ಥಿನಿ ಸಾಯುವ ಮುನ್ನ ಆಸ್ಪತ್ರೆ ಬೆಡ್ ನಲ್ಲಿ ಲಿಖಿತ ಹೇಳಿಕೆ ದಾಖಲಿಸಿದ್ದಳು. ಪ್ರಕರಣ ದಾಖಲಾಗುತ್ತಿದ್ದಂತೆ

ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಿಯಕರನ ಬಂಧನ Read More »