Ad Widget .

ಜಾರ್ಖಂಡ್: ಬಹುಮಹಡಿ ಕಟ್ಟಡಕ್ಕೆ ಬೆಂಕಿ; 14 ಮಂದಿ‌ ಸಜೀವ ದಹನ

ಸಮಗ್ರ ನ್ಯೂಸ್: ಜಾರ್ಖಂಡ್ ನ ಧನ್ಬಾದ್ ನ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಧನ್ಬಾದ್ ನ ಆಶೀರ್ವಾದ್ ಟವರ್ ಜೋರಫಟಕ್ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ಸುಮಾರು 40 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

Ad Widget . Ad Widget .

ಇತ್ತೀಚಿನ ಮಾಹಿತಿಯ ಪ್ರಕಾರ ಸಾವಿನ ಸಂಖ್ಯೆ 14 ಕ್ಕೆ ಏರಿಕೆಯಾಗಿದ್ದು 11 ಮಂದಿ ಮಂದಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅಗ್ನಿ ಅವಘಡದಿಂದ ಉಂಟಾಗಿರುವ ನಷ್ಟದ ಪ್ರಮಾಣ ಇನ್ನಷ್ಟೇ ತಿಳಿಯಬೇಕಿದೆ ಎಂದು ಮುಖ್ಯ ಕಾರ್ಯದರ್ಶಿ ಸುಖ್ ದೇವ್ ಸಿಂಗ್ ಹೇಳಿದ್ದಾರೆ.

Ad Widget . Ad Widget .

ಮೃತಪಟ್ಟವರ ಪೈಕಿ 10 ಮಂದಿ ಹಾಗೂ ಮೂವರು ಮಕ್ಕಳು ಇದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿಎಂ ಹೇಮಂತ್ ಸೊರೇನ್ ಈ ಬಗ್ಗೆ ಮಾತನಾಡಿದ್ದು, ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾ ಆಡಳಿತ ಕಾರ್ಯನಿರ್ವಹಿಸುತ್ತಿದೆ, ಗಾಯಾಳುಗಳನ್ನು ರಕ್ಷಿಸಲಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಗ್ನಿ ಅವಘಡದಿಂದ ಮಂದಿ ಸಾವನ್ನಪ್ಪಿರುವುದು ಹೃದಯವಿದ್ರಾವಕ ಘಟನೆಯಾಗಿದ್ದು, ಸಮರೋಪಾದಿಯಲ್ಲಿ ಜಿಲ್ಲಾಡಾಳಿತ ಕಾರ್ಯನಿರ್ವಹಿಸುತ್ತಿದೆ. ನಾನು ಖುದ್ದಾಗಿ ಪರಿಶೀಲಿಸುತ್ತಿದ್ದೇನೆ ಎಂದು ಸೊರೇನ್ ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *