Ad Widget .

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ವಿಚಾರ| ಕೇಂದ್ರಕ್ಕೆ ನೊಟೀಸ್ ಜಾರಿ‌ ಮಾಡಿದ ಸುಪ್ರೀಂ

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

Ad Widget . Ad Widget .

2002 ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಷನ್’ ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಯೂಟ್ಯೂಬ್​ನಲ್ಲಿ ತೆಗೆದುಹಾಕುವ ನಿರ್ಧಾರದ ಕುರಿತು ದಾಖಲೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

Ad Widget . Ad Widget .

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ತನ್ನ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಮೂರು ವಾರಗಳ ಅವಕಾಶ ನೀಡಿದ್ದು, ಏಪ್ರಿಲ್’ನಲ್ಲಿ ಮುಂದಿನ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಸಂಸದ ಮಹುವಾ ಮೊಯಿತ್ರಾ, ಪತ್ರಕರ್ತ ಎನ್ ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರು ಜಂಟಿಯಾಗಿ ಸಲ್ಲಿಸಿದ ಎರಡು ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

Leave a Comment

Your email address will not be published. Required fields are marked *