Ad Widget .

ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಭೇಟಿ| ಹಲವು ಕಾರ್ಯಕ್ರಮಗಳಿಗೆ ಚಾಲನೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11:30ಕ್ಕೆ ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ಸಪ್ತಾಹದಲ್ಲಿ ಪಾಲ್ಗೊಳ್ಳುವ ಅವರು ಮಧ್ಯಾಹ್ನ 3:30ಕ್ಕೆ ತುಮಕೂರಿನ ಗುಬ್ಬಿ ತಾಲೂಕಿನಲ್ಲಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕದ ಉದ್ಘಾಟನೆ ನೆರವೇರಿಸಲಿದ್ದಾರೆ.

Ad Widget . Ad Widget .

ಬಳಿಕ ಜಲಜೀವನ್ ಮಿಷನ್ ಯೋಜನೆ ಅಡಿ ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರು ತಾಲೂಕಿನ ವಿವಿಧ ಗ್ರಾಮಗಳಿಗೆ ನೀರು ಪೂರೈಸುವ ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದು, ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Ad Widget . Ad Widget .

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು ಮಧ್ಯಾಹ್ನ 1:00 ಗಂಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಾರ್ವಜನಿಕರನ್ನು ಬಿಡಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟದ ಹಲವು ಸಹೋದ್ಯೋಗಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Leave a Comment

Your email address will not be published. Required fields are marked *