ಸಮಗ್ರ ನ್ಯೂಸ್: ಮಂಗಳೂರು ನಗರದ ಸಿಟಿ ಹಾಸ್ಪಿಟಲ್ ಗೆ ಸೇರಿರುವ ಸಿಟಿ ನರ್ಸಿಂಗ್ ಕಾಲೇಜ್ ನ ನೂರಾರು ವಿದ್ಯಾರ್ಥಿಗಳು ಆಹಾರ ಸೇವಿಸಿ ಅಸ್ವಸ್ಥಗೊಂಡಿರುವ ಘಟನೆ ಇಂದು ರಾತ್ರಿ ಬೆಳಕಿಗೆ ಬಂದಿದೆ.
ಶಕ್ತಿನಗರದ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜ್ ಬಸ್ ಗಳಲ್ಲಿ ಕರೆತಂದು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ.
ವಿದ್ಯಾರ್ಥಿಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಮಾಹಿತಿ ಲಭಿಸಿದೆ. ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ.