ಸಮಗ್ರ ನ್ಯೂಸ್: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಲಾಗುತ್ತದೆ. ಈ ಬಗ್ಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಶಿವಮೊಗ್ಗಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ನಗರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಅವರು ಈ ಘೋಷಣೆ ಮಾಡಿದರು.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದಕ್ಕೆ ಯಡಿಯೂರಪ್ಪ ಬಹಳ ಪ್ರಯತ್ನ ಮಾಡಿದ್ದಾರೆ. 18 ತಿಂಗಳಲ್ಲಿ ವಿಮಾನ ನಿಲ್ದಾಣ ಸಿದ್ಧವಾಗಿರುವುದು ದಾಖಲೆ ಎಂದಿದ್ದಾರೆ. ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಆ ದಿನ 3 ಲಕ್ಷ ಜನ ಸೇರಲಿದ್ದಾರೆ. ಆಗ ಪ್ರಧಾನಿ ನರೇಂದ್ರ ಮೋದಿ ಅವರೆ ವಿಮಾನ ನಿಲ್ದಾಣದ ಹೆಸರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.