ಸಮಗ್ರ ನ್ಯೂಸ್: ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಅರಂತೋಡು ಎಲಿಮಲೆ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿದ್ದು, ಸಾರ್ವಜನಿಕರು ಅಪೂರ್ಣ ರಸ್ತೆಯಲ್ಲಿ ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೆಲ ದಿನಗಳ ಹಿಂದೆ ಗುದ್ದಲಿ ಪೂಜೆ ನಡೆಸಿ ಕಾಮಗಾರಿ ಪ್ರಾರಂಭಿಸಿ ರಸ್ತೆಯುದ್ದಕ್ಕೂ ಜಲ್ಲಿ ಹಾಕಲಾಗಿತ್ತು. ಆದರೆ ಇದೀಗ ಪುತ್ತೂರಿಗೆ ಕಾರ್ಯಕ್ರಮದ ಹಿನ್ನಲೆ ಕೇಂದ್ರ ಮಂತ್ರಿ ಅಮಿತ್ ಶಾ ಬರುವ ಕಾರಣ ಪುತ್ತೂರಿನ ಕೆಲ ರಸ್ತೆಗಳನ್ನು ಸರಿಪಡಿಸಲು ಕಾಂಟ್ರಾಕ್ಟರ್ ಅರಂತೋಡು ಎಲಿಮಲೆ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಇದೀಗ ಈ ರಸ್ತೆಯಲ್ಲಿ ಜಲ್ಲಿ ಕಲ್ಲುಗಳನ್ನು ಮಾತ್ರ ಹಾಕಿರುವುದರಿಂದ ಇಲ್ಲಿ ಓಡಾಡುವ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ ಎನ್ನುವ ದೂರು ಸಾರ್ವಜನಿಕರಿಂದ ಕೇಳಿ ಬಂದಿದೆ.