Ad Widget .

ಸುರತ್ಕಲ್ ಹಲ್ಲೆ ಪ್ರಕರಣ; ಇತ್ತಂಡಗಳಿಂದ‌ ದೂರು ದಾಖಲು

ಸಮಗ್ರ‌ ನ್ಯೂಸ್: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಸುರತ್ಕಲ್‌ ಕಾಟಿಪಳ್ಳ ನಿವಾಸಿ ಫಾಝಿಲ್ ಸಹೋದರ ಆದಿಲ್ ಮೇಲೆ ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ವಾಗ್ವಾದ ನಡೆದು ಇಬ್ಬರು ಯುವಕರು ಹಲ್ಲೆ ನಡೆಸಿರುವ ಘಟನೆ ಕಾಟಿಪಳ್ಳ ಬಳಿಯ ಗಣೇಶಪುರದಲ್ಲಿ ಫೆ.8ರ ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತಂಡಗಳಿಂದ ದೂರು‌ ದಾಖಲಾಗಿದೆ.

Ad Widget . Ad Widget .

ವಾಹನಕ್ಕೆ ಸೈಡ್ ಕೊಡುವ ವಿಚಾರವಾಗಿ ಆದಿಲ್ ಮತ್ತು ನಾಗೇಶ್ ಎಂಬವರ ನಡುವೆ ವಾಗ್ವಾದ ನಡೆದಿತ್ತು. ಎರಡೂ ತಂಡಗಳ ನಡುವೆ ಮಾತಿನ ಚಕಮಕಿ ನಡೆದು ನಾಗೇಶ್ ಮತ್ತು ಆತನ ಜೊತೆಗಿದ್ದವರು ಆದಿಲ್ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಸ್ಥಳದಲ್ಲಿ ಜನರು ಜಮಾಯಿಸಿದ್ದು ಹಲ್ಲೆ ನಡೆಸಿದ ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

Ad Widget . Ad Widget .

ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿರುವುದಾಗಿ ವರದಿಯಾಗಿದೆ.

ಕಾಟಿಪಳ್ಳದ ನಿವಾಸಿಗಳಾದ ಪ್ರೀತಂ ಶೆಟ್ಟಿ, ಆಕಾಶ್, ಪ್ರಕಾಶ್, ಬಂಟ್ವಾಳದ ಹರ್ಷಿತ್ ಸೇರಿ ಐವರಿದ್ದ ತಂಡ ಹಲ್ಲೆ, ಕೊಲೆ ಬೆದರಿಕೆ ಹಾಕಿರುವುದಾಗಿ ಗಾಯಾಳು ಆದಿಲ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಮಂಗಳಪೇಟೆಯ ನಿವಾಸಿಗಳಾದ ಆದಿಲ್ ಮೆಹರೂಫ್, ಉಮರ್ ಫಾರೂಕ್, ಅಬ್ದುಲ್ ಹಮೀದ್, ಉಮರ್ ಫಾರೂಕ್ ಎಂಬವರು ಹಲ್ಲೆ, ಕೊಲೆ ಬೆದರಿಕೆ ಹಾಕಿರುವುದಾಗಿ ನಾಗೇಶ್ ದೇವಾಡಿಗ ಎಂಬವರ ಪ್ರತಿ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *