Ad Widget .

ಗ್ಯಾಸ್ ಟ್ಯಾಂಕರ್ ರೈಲಿನಲ್ಲಿ ಅಡುಗೆ ಅನಿಲ ಸೋರಿಕೆ ಅನುಮಾನ| ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಪರಿಶೀಲನೆ

ಸಮಗ್ರ ನ್ಯೂಸ್: ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಫೆ.9ರ ಗುರುವಾರ ಬೆಳಿಗ್ಗೆ ನಡೆದಿದೆ.

Ad Widget . Ad Widget .

ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ವ್ಯಕ್ತವಾಗಿದೆ. ಇದಕ್ಕೆ ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ‌.

Ad Widget . Ad Widget .

ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.

ತಕ್ಷಣವೇ ಕಾರ್ಯಪ್ರವೃತ್ತಗೊಂಡ ಅನಿಲ ಕಂಪೆನಿಯು ಎಮರ್ಜೆನ್ಸಿ ರೆಸ್ಪಾನ್ಸ್ ತಂಡವನ್ನು ಸ್ಥಳಕ್ಕೆ ಕಳುಹಿಸಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ‌ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *