ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳ ನಿಮಿತ್ತ ಪುತ್ತೂರು ವಲಯ ವ್ಯಾಪ್ತಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ನಾಳೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ ಆರ್ ರವಿಕುಮಾರ್ ಆದೇಶ ಹೊರಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಲುವಾಗಿ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪುತ್ತೂರು ವಲಯ ವ್ಯಾಪ್ತಿಯಲ್ಲಿ ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಾಳೆ ಮಧ್ಯಾಹ್ನದಿಂದ ರಾತ್ರಿಯವರೆಗೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ. ಈ ನಿಯಮ ಮೀರಿ ಮಾರಾಟ ಮಾಡಿದರೇ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.