ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಅನ್ಯಮತೀಯ ಜೋಡಿಯ ವಾಯುವಿಹಾರ| ಸಂಘಟನೆ ಕಾರ್ಯಕರ್ತರಿಂದ ಗೂಸಾ; ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಕದ್ರಿ ಪಾರ್ಕ್‌ಗೆ ವಾಯುವಿಹಾರಕ್ಕೆಂದು ಬಂದಿದ್ದ ಅನ್ಯಮತೀಯ ಜೋಡಿಗೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Ad Widget ... ..

ಮೂಲತಃ ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿಯಾಗಿದ್ದು, ಇವರು ಕದ್ರಿ ಪಾರ್ಕ್‌ಗೆ ಬಂದಿದ್ದು, ಇದನ್ನು ಗಮನಿಸಿದ ಸಂಘಟನೆಯವರು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ. ಜೋಡಿಯನ್ನು ಕದ್ರಿ ಠಾಣಾ ಪೊಲೀಸರಿಗೆ ಕಾರ್ಯಕರ್ತರು ಒಪ್ಪಿಸಿದ ಬಗ್ಗೆ ವರದಿಯಾಗಿದೆ.

Ad Widget

ಪ್ರಕರಣದ ವಿಚಾರಣೆ ನಡೆಸಿದ ಕದ್ರಿ ಠಾಣಾ ಪೊಲೀಸರು ಜೋಡಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *