Ad Widget .

ಫೆ.11 ಕೇಂದ್ರ ಗೃಹ ಸಚಿವ ದ.ಕ ಜಿಲ್ಲಾ ಪ್ರವಾಸ| ಸಚಿವರ ರೋಡ್ ಶೋ ರದ್ದು; ಕೋರ್ ಕಮಿಟಿ ಸಭೆಯಷ್ಟೇ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೆ.11 ರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ವೇಳೆ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಡ್ ಶೋ ವನ್ನು ರದ್ದುಪಡಿಸಲಾಗಿದೆ. ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರು, ಅಮಿತ್ ಶಾ ಅವರು ಪುತ್ತೂರಿನಿಂದ ಮಂಗಳೂರಿಗೆ ಬರುವ ಕಾರ್ಯಕ್ರಮದಲ್ಲಿ ಅರ್ಧ ಗಂಟೆ ವಿಳಂಬವಾಗಲಿದೆ. ಕತ್ತಲೆಯಾಗುವ ಕಾರಣ ಭದ್ರತಾ ದೃಷ್ಟಿಯಿಂದ ರೋಡ್ ಶೋ ರದ್ದುಪಡಿಸಲಾಗಿದೆ ಎಂದರು.

Ad Widget . Ad Widget .

ಅಲ್ಲದೆ ಅಮಿತ್ ಶಾ ಏರ್​ಪೋರ್ಟ್ ನಿಂದ ಬಂದು ಕೆಂಜಾರು ಎಂಬಲ್ಲಿ ಕಾರ್ಯಕರ್ತರಿಗೆ ಕಾಣಿಸಿಕೊಂಡು ಕೋರ್ ಕಮಿಟಿ ಮೀಟಿಂಗ್ ಗೆ ತೆರಳಲಿದ್ದಾರೆ. ಕೆಂಜಾರಿನಲ್ಲಿರುವ ಶ್ರೀದೇವಿ ಕಾಲೇಜಿನಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ. ಇದರಲ್ಲಿ ಆರು ಜಿಲ್ಲೆಗಳ ಬಿಜೆಪಿ ಮುಖಂಡರುಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

Ad Widget . Ad Widget .

ಫೆಬ್ರವರಿ 11 ರಂದು ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲಕ್ಕೆ ಆಗಮಿಸಲಿರುವ ಅಮಿತ್ ಶಾ ಅವರು 3.15 ಕ್ಕೆ ಹನುಮಗಿರಿ ಪಂಚಮುಖಿ ಆಂಜನೇಯ ಕ್ಷೇತ್ರದ ಪಕ್ಕದಲ್ಲೇ ಧರ್ಮಶ್ರೀ ಪ್ರತಿಷ್ಠಾನದ ವತಿಯಿಂದ ನಿರ್ಮಿಸಲಾದ ಭಾರತ ಮಾತಾ ಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಈಶ್ವರಮಂಗಲದಿಂದ ಪುತ್ತೂರಿಗೆ 3.40 ಕ್ಕೆ ಬರುವ ಅವರು ಪುತ್ತೂರಿನಲ್ಲಿ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಲ್ಲಿಂದ ಕ್ಯಾಂಪ್ಕೋ ಫ್ಯಾಕ್ಟರಿ ವೀಕ್ಷಿಸಿ ಹೆಲಿಕಾಪ್ಟರ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 6 ಗಂಟೆಗೆ ತಲುಪಲಿದ್ದಾರೆ. ಸಂಜೆ 6 ಗಂಟೆಯ ಬಳಿಕ ಮಂಗಳೂರಿನ ಕೆಂಜಾರಿನಲ್ಲಿ ಕಾರ್ಯಕರ್ತರನ್ನು ಭೇಟಿಯಾಗಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಸಭೆ ಮುಗಿಸಿ ರಾತ್ರಿ 8. 20 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.

ಕೊರಗಜ್ಜ ದೈವದ ಕೋಲ ಹಿನ್ನೆಲೆ ರೋಡ್ ಶೋ ರದ್ದು?:
ಅಮಿತ್ ಶಾ ಅವರ ರೋಡ್ ಶೋ ರದ್ದಿಗೆ ಅಂದು ನಡೆಯುವ ಕೊರಗಜ್ಜನ ಕೋಲ ಕಾರಣ ಎಂಬ ವಿಚಾರವು ಕೇಳಿ ಬರುತ್ತಿದೆ. ರೋಡ್ ಶೋ ನಡೆಯಬೇಕಿದ್ದ ಪದವಿನಂಗಡಿ ಬಳಿ ಅಂದು ಕೊರಗಜ್ಜ ದೈವದ ಕೋಲ ಇದೆ. ರೋಡ್ ಶೋ ಕಾರಣದಿಂದ ಭದ್ರತೆಯ ಹಿತದೃಷ್ಟಿಯಿಂದ ಕೋಲ ನಡೆಸಲು ಸಮಸ್ಯೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ರೋಡ್ ಶೋ ರದ್ದು ಪಡಿಸಲಾಗಿದೆ ಎಂಬ ಮಾತುಗಳು ಹರಿದಾಡುತ್ತಿವೆ.

Leave a Comment

Your email address will not be published. Required fields are marked *