Ad Widget .

ಫೆ.11 ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ವ್ಯತ್ಯಯ ಸಾಧ್ಯತೆ| ಮಂಗಳೂರು ವಿವಿ ಪದವಿ ಪರೀಕ್ಷೆಗೆ ಹೊರಟ ವಿದ್ಯಾರ್ಥಿಗಳಿಗೆ ಸಂಕಷ್ಟ

ಸಮಗ್ರ ನ್ಯೂಸ್: ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮ ನಿಮಿತ್ತ ಫೆ.11 ರಂದು ಪುತ್ತೂರಿಗೆ ಅಮಿತ್ ಶಾ ಭೇಟಿ ಹಿನ್ನೆಲೆ ಕೆಎಸ್ಆರ್ ಟಿಸಿ ಬಸ್ ಸಂಚಾರ ವ್ಯತ್ಯಯ ಕಾರಣ ಮಂಗಳೂರು ವಿವಿ ಪದವಿ ಪರೀಕ್ಷೆಗೆ ಹೊರಟ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ.

Ad Widget . Ad Widget .

ಪುತ್ತೂರಿನಲ್ಲಿ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಹಾಗೂ ಸಚಿವರುಗಳು ಭಾಗವಹಿಸಲಿದ್ದು, ಈ ಹಿನ್ನೆಲೆಯಲ್ಲಿ KSRTC ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ಪುತ್ತೂರು ವಿಭಾಗದ ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲು ಕಾರ್ಯಕ್ರಮದ ಸಂಯೋಜಕರಿಂದ ಬೇಡಿಕೆ ಬಂದಿದೆ. ಅದರಂತೆ ಪುತ್ತೂರು ವಿಭಾಗದಿಂದ ಸದರಿ ಕಾರ್ಯಕ್ರಮದ ಪ್ರಯುಕ್ತ ಗರಿಷ್ಠ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತಿದೆ. ಆದ್ದರಿಂದ ಫೆ.11ರಂದು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಕಡಬ ಹಾಗೂ ಮಡಿಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿರುತ್ತದೆ.

ಆದರೆ ಮಂಗಳೂರು ವಿ.ವಿ ಯ ಪದವಿ ತರಗತಿಗಳ‌ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಬಸ್ ವ್ಯತ್ಯಯದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಹಾಜರಾಗಲು ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಫೆ.11ರಂದು ಕೂಡ ಪರೀಕ್ಷೆ ನಡೆಯಲಿದ್ದು, ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಗೆ ತೆರಳಲು ಸರ್ಕಾರಿ ಬಸ್ ಗಳನ್ನು ಬಳಸುವ ಕಾರಣ ಈ ರೀತಿ ಬಸ್ ಸಂಚಾರದಲ್ಲಿ ವ್ಯತ್ಯಯ ಮಾಡಿದರೆ ಪರೀಕ್ಷೆ ಸಮಯಕ್ಕೆ ಸರಿಯಾಗಿ ತಲುಪುವುದು ಹೇಗೆ? ಎಂಬ ಆತಂಕ ಶುರುವಾಗಿದೆ.

ಈ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯಕ್ಕೆ ಸರಿಯಾಗಿ ತಲುಪವ ಹಾಗೇ ಮತ್ತು ಪರೀಕ್ಷೆ ಬರೆಯಲು ಯಾವುದೆ ಅಡಚಣೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಹಕರಿಸಬೇಕಾಗಿದೆ.

Leave a Comment

Your email address will not be published. Required fields are marked *