Ad Widget .

ನೇಣುಬಿಗಿದು ಕಂಬಳ ಓಟಗಾರ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಂಬಳ‌ ಓಟಗಾರ ಉಡುಪಿಯ ಶಿರೂರು ಟೋಲ್‌ಗೇಟ್‌ ಬಳಿಯ ನಿವಾಸಿ, ಸುರೇಶ ಕಾಡಿನತಾರು (37) ಅವರು ಫೆ. 9ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget . Ad Widget .

ಕೋರ್ಟ್ ಪ್ರೋಸೆಸ್ ಹುದ್ದೆಯಲ್ಲಿದ್ದ ಅವರು ಪ್ರಸ್ತುತ ಪ್ರಕರಣವೊಂದಕ್ಕೆ ಸಂಬಂಧಿಸಿ ಅಮಾನತುಗೊಂಡಿದ್ದರು. ಇದರಿಂದ ಮನನೊಂದು ಪತ್ನಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟೋಲ್‌ಗೇಟ್‌ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಅವರ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ಸುರೇಶ್ ಮೇಲೆ ಬೈಂದೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಕೋರ್ಟ್ ಪ್ರೋಸೆಸ್ ಹುದ್ದೆಯಿಂದ ಅಮಾನತು ಮಾಡಲಾಗಿತ್ತು. ಕಂಬಳ ಪೋಷಕರಾಗಿದ್ದ ಅವರು ಹಗ್ಗ ವಿಭಾಗದ ಓಟಗಾರರಾಗಿದ್ದಾರೆ. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

“ಸಾವಿಗೆ ಯಾರೂ ಕಾರಣರಲ್ಲ”
“ಸಾರಿ ಸಾರಿ ಸಾರಿ, ನನ್ನ ಸಾವಿಗೆ ಯಾರೂ ಕಾರಣರಲ್ಲ. ನನ್ನ ಮನೆಯವರು ನಿನಗೆ ರಗಳೆ ಮಾಡಬಹುದು. ಅವರಿಗೆಲ್ಲ ವಾಯ್ಸ್ ಮೆಸೇಜ್ ತೋರಿಸು. ನನಗೆ ಕೆಲಸ ಆಗಲಿಲ್ಲ. ಅದೇ ತಲೆಬಿಸಿಯಲ್ಲಿ ತಪ್ಪು ಮಾಡುತ್ತಿದ್ದೇನೆ. ನನ್ನಿಂದ ಈ ತರಹ ಹೇಡಿ ಕಂಡ ಹಾಗೆ ಬದುಕಲು ಆಗುವುದಿಲ್ಲ, ನಾನು ಸಾಯುತ್ತಿದ್ದೇನೆ. ಗೇರು ಮರಕ್ಕೆ ನೇಣು ಹಾಕಿಕೊಳ್ಳುತ್ತಿದ್ದೇನೆ ಬೇರೆ ಎಲ್ಲೂ ಹುಡುಕುವುದು ಬೇಡ’ ಎಂದು ಪತ್ನಿಯ ಮೊಬೈಲ್‌ಗೆ ಸುರೇಶ್ ವಾಯಿಸ್ ಮೆಸೇಜ್ ಕಳುಹಿಸಿದ್ದರು.

Leave a Comment

Your email address will not be published. Required fields are marked *