Ad Widget .

ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ ಆರೀಫ್ ಅರೆಸ್ಟ್| ಗೃಹ‌ಸಚಿವ ಆರಗ‌ ಜ್ಞಾನೇಂದ್ರ ಹೇಳಿಕೆ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ರಾಜ್ಯ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

Ad Widget . Ad Widget .

ಬಂಧಿತ ಆರೀಫ್ ಎಂಬಾತ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎನ್ನಲಾಗಿದ್ದು, ಅದಕ್ಕೂ ಮುನ್ನವೇ ಪೊಲೀಸರು ಈತನನ್ನು ವಶಕ್ಕೆ ಪಡೆದಿರುವುದಕ್ಕೆ ಪೊಲೀಸರನ್ನು ಅಭಿನಂದಿಸಿದ್ದಾರೆ.ರಾಜ್ಯ ಪೊಲೀಸರು ಕೇಂದ್ರದ ಬೇಹುಗಾರಿಕಾ ಸಂಸ್ಥೆಯ ಅಧಿಕಾರಿಗಳ ಸಹಾಯದಿಂದ ಈತನನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆದಿದೆ.

Ad Widget . Ad Widget .

ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳು ಹಾಗೂ ಅವುಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ ಸದಾ ಕಣ್ಗಾವಲನ್ನಿರಿಸಲಾಗಿದ್ದು, ದೇಶ ದುರ್ಬಲಗೊಳಿಸುವ ಎಲ್ಲ ಪ್ರಯತ್ನಗಳನ್ನು ಹತ್ತಿಕ್ಕಲಾಗುವುದು ಎಂದು ಗೃಹ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Comment

Your email address will not be published. Required fields are marked *