ಅರಸೀಕೆರೆಗೆ ಹೊಸ ಅಭ್ಯರ್ಥಿ ಘೋಷಿಸಿದ ಜೆಡಿಎಸ್| ಹಾಲಿ ಶಾಸಕ ಶಿವಲಿಂಗೇಗೌಡರಿಗೆ ಟಾಂಗ್

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕುತೂಹಲಕ್ಕೆ ಕಾರಣವಾಗಿದ್ದು, ಈ ಬಾರಿ ಹಾಸನ ಜಿಲ್ಲೆಯ ಅರಸಿಕೆರೆ ಕ್ಷೇತ್ರದ ಹಾಲಿ ಅಭ್ಯರ್ಥಿ ಶಿವಲಿಂಗೇಗೌಡರನ್ನು ಕೈಬಿಟ್ಟು ಹೊಸ ಅಭ್ಯರ್ಥಿಗೆ ಜೆಡಿಎಸ್ ಟಿಕೆಟ್ ಘೋಷಣೆ ಮಾಡಲಾಗಿದೆ.

. Ad Widget . Ad Widget . Ad Widget

ಅರಸಿಕೆರೆಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಬಾಣಾವರ ಅಶೋಕ್ ಗೆ ಅರಸಿಕೆರೆ ಜೆಡಿಎಸ್ ಟಿಕೆಟ್ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಹಾಲಿ ಶಾಸಕ ಶಿವಲಿಂಗೇಗೌಡರಿಗೆ ಸೆಡ್ಡು ಹೊಡೆದಿದ್ದಾರೆ.

. Ad Widget .

ಸಮಾವೇಶದಲ್ಲಿ ಹಾಲಿ ಶಾಸಕ ಶಿವಲಿಂಗೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಪಕ್ಷವನ್ನು ಹಂತಹಂತವಾಗಿ ಮುಗಿಸಲು ಯತ್ನಿಸಿದ್ದರು. ಸಭೆಗೆ ಹೋಗದಂತೆ ಹಣ ಹಂಚಿಕೆ ಮಾಡಿದ್ದಾರೆ. ನಿನ್ನೆ ಕೂಡ ಶಿವಲಿಂಗೇಗೌಡರ ಜತೆ ಹೆಚ್.ಡಿ. ರೇವಣ್ಣ ಮಾತನಾಡಿ, ದುಡುಕಬೇಡಿ ಜೆಡಿಎಸ್ ನಲ್ಲಿಯೇ ಇರುವಂತೆ ಹೇಳಿದ್ದರು ಎಂದಿದ್ದಾರೆ.

Leave a Comment

Your email address will not be published. Required fields are marked *