ಕಡಬ: ಕೆಎಸ್ಸಾರ್ಟಿಸಿ ಬಸ್ – ಕಾರು ನಡುವೆ ಡಿಕ್ಕಿ ; ನಾಲ್ವರು ಗಂಭೀರ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರ (ಫೆ.13)ದಂದು ನಡೆದಿದೆ.

Ad Widget ... ..

ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂ ಕೆಎಸ್ಸಾರ್ಟಿಸಿ ವಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಎದುರು ಮುಖಾಮುಖಿ ಢಿಕ್ಕಿ ಸಂಭವಿಸಿದೆ.

Ad Widget

ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ರವಾನಿಸಲಾಗಿದೆ.

Leave a Comment

Your email address will not be published. Required fields are marked *