ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದಷ್ಟೇ ಟರ್ಕಿಯಲ್ಲಿ ಸಂಭವಿಸಿದ ಭಾರೀ ಭೂಕಂಪ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿತ್ತು. ಆದರೀಗ ಇದರ ಬೆನ್ನಲ್ಲೇ ಸೋಮವಾರ ಬೆಳಗ್ಗೆ ಈಶಾನ್ಯ ರಾಜ್ಯ ಸಿಕ್ಕಿಂನ ಕೆಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ.
ಈವರೆಗೂ ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ರಾಷ್ಟ್ರೀಯ ಭೂಕಂಪ ಕೇಂದ್ರದ ಪ್ರಕಾರ, ನಸುಕಿನ ಜಾವ 4.15 ಕ್ಕೆ ಕಂಪನದ ಅನುಭವವಾಯಿತು. ಇದರ ಕೇಂದ್ರವು ಈಶಾನ್ಯ ಯುಕ್ಸೋಮ್‌ನಲ್ಲಿತ್ತು. ಭೂಕಂಪದ ಕೇಂದ್ರಬಿಂದು ಮೇಲ್ಮೈಯಿಂದ 70 ಕಿಲೋಮೀಟರ್ ಆಳದಲ್ಲಿದೆ ಎಂದು ವರದಿಯಾಗಿದೆ.
ರಾಷ್ಟ್ರೀಯ ಭೂಕಂಪ ಕೇಂದ್ರದ ವರದಿಯ ಪ್ರಕಾರ, ಕಂಪನವು ಸಂಜೆ 4.18 ಕ್ಕೆ ಅನುಭವವಾಯಿತು ಮತ್ತು ಕೇಂದ್ರಬಿಂದುವು ನಾಗಾನ್ ಜಿಲ್ಲೆಯ ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯಲ್ಲಿದೆ. ಭೂಕಂಪದ ಕೇಂದ್ರಬಿಂದುವು ಮೇಲ್ಮೈಯಿಂದ 10 ಕಿಲೋಮೀಟರ್ ಆಳದಲ್ಲಿದೆ ಎಂದು ವರದಿಗಳು ತಿಳಿಸಿವೆ.