Ad Widget .

ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿ‌ ಶಾಫಿ‌ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ ಎಸ್ಡಿಪಿಐ| ಪುತ್ತೂರು ‌ಕ್ಷೇತ್ರದಿಂದ ವಿಧಾನಸಭೆಗೆ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್ಡಿಪಿಐ ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್​ ಘೋಷಿಸಿದೆ.

Ad Widget . Ad Widget .

ಎಸ್​ಡಿಪಿಐನ ಈ ನಡೆ ವಿವಾದ ಕೂಡ ಉಂಟು ಮಾಡಿದೆ. ಸಾಕ್ಷ್ಯಾಧಾರ ಮುಂದಿಟ್ಟು ಎನ್​ಐಎ ಶಾಫಿ ಬೆಳ್ಳಾರೆಯನ್ನು ಬಂಧಿಸಿದೆ. ಸದ್ಯ ಕೇಂದ್ರ ತನಿಖಾ ಸಂಸ್ಥೆಗಳ ವಶದಲ್ಲಿದ್ದು, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

Ad Widget . Ad Widget .

ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವುದಾಗಿ ಎಸ್​ಡಿಪಿಐ ಕಾರ್ಯಕರ್ತರ ಸಮಾವೇಶ ದಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್​ ಖಾನ್​ ಆಗಿದ್ದು, ಶಾಫಿ ಬೆಳ್ಳಾರೆ ಎಸ್​ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿದ್ದಾರೆ. ಸದ್ಯ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಎನ್‌ಐಎ ಬಂಧನದಲ್ಲಿರುವ ಶಾಫಿ ಬೆಳ್ಳಾರೆ, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆರೋಪಿ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ SDPI ಭಾರಿ ವಿವಾದ ಸೃಷ್ಟಿಸಿದೆ.

Leave a Comment

Your email address will not be published. Required fields are marked *