Ad Widget .

ಕುಮಾರಸ್ವಾಮಿಗೆ ಖೆಡ್ಡಾ ತೋಡಿದ್ರಾ‌ ಸಿದ್ದರಾಮಯ್ಯ? ಮಾಜಿ ಸಿಎಂ ಎದುರು ಮಾಜಿ ಸಂಸದೆಗೆ ಕಾಂಗ್ರೆಸ್ ಟಿಕೆಟ್!?

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ ಕೂಡ ಹಣಾಹಣಿ ನಡೆಸುತ್ತಿದೆ.

Ad Widget . Ad Widget .

ಮುಖ್ಯಮಂತ್ರಿ ಹುದ್ದೆ ಮೇಲೆ ಕಾಂಗ್ರೆಸ್ ನಾಯಕರುಗಳಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಕಣ್ಣಿಟ್ಟಿದ್ದು ಮುಸುಕಿನ ಗುದ್ದಾಟ ಮುಂದುವರಿದಿದೆ. ಇದೇ ವೇಳೆ ಡಿ.ಕೆ ಶಿವಕುಮಾರ್ ಅವರನ್ನು ಮಣಿಸಲು ತಮ್ಮದೇ ಆದ ತಂತ್ರ ರೂಪಿಸುತ್ತಿದ್ದಾರೆ. ಇದರ ಭಾಗವಾಗಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಯಾಂಡಲ್ ವುಡ್ ನಟಿ ರಮ್ಯಾ ಅವರನ್ನು ಕಣಕ್ಕಿಳಿಸಬೇಕೆಂದು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

Ad Widget . Ad Widget .

ಕನಕಪುರ ಬಂಡೆ ಬುಡಕ್ಕೆ ಡೈನಾಮೇಟ್ ಇಟ್ಟು, ಕುಮಾರಸ್ವಾಮಿಯನ್ನು ಲಾಕ್ ಮಾಡುವ ದಾಳವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹೂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೆಡಿಎಸ್ನಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುವುದು ಖಚಿತವಾಗಿದೆ.

ಇವರಿಬ್ಬರ ಎದುರು ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದ ಕಾಂಗ್ರೆಸ್ ವರಿಷ್ಠರು ಉದ್ಯಮಿ ಪ್ರಸನ್ನ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಕುಮಾರಸ್ವಾಮಿ ಮತ್ತು ಯೋಗೇಶ್ವರ್ ಎದುರು ಪ್ರಬಲ ಅಭ್ಯರ್ಥಿಯೊಬ್ಬರ ಹುಡುಕಾಟದಲ್ಲಿರುವ ಕಾಂಗ್ರೆಸ್ ಚಿತ್ರನಟಿ ರಮ್ಯಾ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಚಿಂತನೆ ನಡೆಸಿದೆ ಎನ್ನಲಾಗಿದೆ. ಪಕ್ಷದ ಸಾಂಪ್ರದಾಯಿಕ ಮತಗಳ ಜತೆಗೆ ಮಹಿಳಾ ಮತದಾರರನ್ನು ಸೆಳೆಯಬಹುದು ಎನ್ನುವ ಲೆಕ್ಕಾಚಾರ ಇದರ ಹಿಂದಿದೆ.

ಒಟ್ಟಾರೆ ಕುಮಾರಸ್ವಾಮಿಯನ್ನು ಶತಾಯಗತಾಯ ಸೋಲಿಸಲೇ ಬೇಕೆನ್ನುವ ಹಠಕ್ಕೆ ಬಿದ್ದಿರುವ ಸಿದ್ದರಾಮಯ್ಯ ದಿನಕ್ಕೊಂದು ಅಸ್ತ್ರಗಳ ಪ್ರಯೋಗಕ್ಕೆ ಮುಂದಾಗಿದ್ದಾರೆ.

Leave a Comment

Your email address will not be published. Required fields are marked *