Ad Widget .

ಕಾರ್ಕಳದಿಂದ ಪ್ರಮೋದ್ ಮಾತಾಲಿಕ್ ಸ್ಪರ್ಧೆ |’ನಿಮ್ಮ ಬಗ್ಗೆ ಮೊದಲೇ ಅನುಮಾನವಿತ್ತು’ | ಸರಣಿ ಟ್ವೀಟ್ ಮಾಡಿದ ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆ 2023ಕ್ಕೆ ಕಾರ್ಕಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಘೋಷಣೆ ಮಾಡಿದ್ದಾರೆ.

Ad Widget . Ad Widget .

ಸೋಮವಾರ ಕಾರ್ಕಳ ಶಾಸಕ, ಇಂಧನ ಸಚಿವ ವಿ. ಸುನಿಲ್ ಕುಮಾರ್ ಸರಣಿ ಟ್ವೀಟ್ ಮಾಡಿದ್ದಾರೆ. ‘ಪ್ರಿಯ ಮುತಾಲಿಕ್ ಜೀ, ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ ಎಂದು ನಮಗೆ ಮೊದಲೇ ಅನುಮಾನವಿತ್ತು. ಅದೀಗ ನಿಜವಾಗಿದೆ!’ ಎಂದು ಹೇಳಿದ್ದಾರೆ.

Ad Widget . Ad Widget .

‘ಸ್ವಂತ ಬುದ್ಧಿಯಿಂದ ನೀವು ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ನೀವು ಕಾರ್ಕಳದಿಂದ ಸ್ಪರ್ಧೆಗೆ ಇಳಿಯುವುದನ್ನು ನಾನು ಮೊದಲೇ ಸ್ವಾಗತಿಸಿದ್ದೇನೆ. ಈಗ ನಿಮಗೆ ತನು ಮನ ಧನ ಸಹಾಯ ಮಾಡುವವರೂ ಕಾರ್ಕಳಕ್ಕೆ ಬಂದು ಪ್ರಚಾರ ಮಾಡಲಿ ಎಂದು ನಾನು ಆಶಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

‘ನಿಮ್ಮ ಸ್ಪರ್ಧೆಯ ಉದ್ದೇಶ ಏನೆಂಬುದನ್ನು ಕೆಲ ದಿನಗಳ ಹಿಂದೆ ವೋಟು, ನೋಟು ಹೇಳಿಕೆಯ ಮೂಲಕ ತಿಳಿಸಿದ್ದಿರಿ. ಈಗ ತನುಮನಧನ ಸಹಾಯವಿದೆ ಎಂದು ಹೇಳುತ್ತಿದ್ದೀರಿ. ಒಟ್ಟಾರೆಯಾಗಿ ನಿಮ್ಮ‌ಈ ಸ್ಪರ್ಧೆಯ ಉದ್ದೇಶ ಕಾರ್ಕಳದ ಹಿತವಲ್ಲ, ಹಿಂದುತ್ವದ ಹಿತವಲ್ಲ, ಜನತೆಯ ಹಿತವೂ ಅಲ್ಲ. ಅದು ತನು-ಮನ-ಧನ-ನೋಟಿಗಾಗಿ ಎಂಬುದು ನಿಮ್ಮ ಹೇಳಿಕೆಯಲ್ಲೇ ಸ್ಪಷ್ಟವಾಗಿದೆ’ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *