Ad Widget .

ಫೆಬ್ರವರಿ 14 ಭಾರತೀಯರು ಮರೆಯಬಾರದ ದಿನ| ಯಾಕೆ ಗೊತ್ತಾ?

ಸಮಗ್ರ ನ್ಯೂಸ್: ಫೆ.14. ಭಾರತೀಯರು ಮರೆಯಲಾಗದ ದಿನ. ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು.

Ad Widget . Ad Widget .

ನಾಲ್ಕು ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್ಪಿಎಫ್ ಅಧಿಕಾರಿಗಳ ಸಾವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾದಾಗ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು. ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವವನ್ನು ಬಲಿಕೊಟ್ಟರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಗೆ ಅತ್ಯಂತ ಭೀಕರವಾಗಿ ದಾಳಿ ನಡೆಸಲಾಗಿತ್ತು. ಫೆಬ್ರವರಿ 14, 2019 ರಂದು ಮಧ್ಯಾಹ್ನ ಹೊತ್ತಿಗೆ ಈ ಭೀಕರ ದಾಳಿ ನಡೆದಿತ್ತು.

Ad Widget . Ad Widget .

ಭಾರತ ಇಂದು ಭೀಕರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 40 ವೀರ ಸಿಆರ್‌ಪಿಎಫ್ ಯೋಧರನ್ನು ಸ್ಮರಿಸುತ್ತಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 44 ರ ಜಮ್ಮು-ಶ್ರೀನಗರ ವಿಭಾಗದಲ್ಲಿ ಯೋಧರನ್ನು ಹೊತ್ತೊಯ್ಯುತ್ತಿದ್ದ ಸೇನಾ ಟ್ರಕ್‌ ಮೇಲೆ ಈ ದಾಳಿ ನಡೆದಿತ್ತು. ಸ್ಫೋಟಕ ತುಂಬಿದ ಎಸ್‌ಯುವಿ ಸಿಆರ್‌ಪಿಎಫ್ ಬಸ್ ಒಂದಕ್ಕೆ ಡಿಕ್ಕಿ ಹೊಡೆದು 40 ಭಾರತೀಯ ಸಿಆರ್‌ಒಎಫ್ ಸೈನಿಕರನ್ನು ಕೊಂದಿತು. ಬಸ್ ಚಾಲಕನನ್ನು ಜೈಶ್-ಎ-ಮೊಹಮ್ಮದ್ ಆತ್ಮಾಹುತಿ ಬಾಂಬರ್ ಎಂದು ಗುರುತಿಸಲಾಗಿದ್ದು, ದಾಳಿಯ ನಂತರ, ಜೈಶ್-ಎ-ಮೊಹಮ್ಮದ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು. ದಾಳಿಕೋರ ಆದಿಲ್ ಅಹ್ಮದ್ ದಾರ್ ಎಂಬ 22 ವರ್ಷದ ಯುವಕನ ಆತ್ಮಹತ್ಯಾ ಬಾಂಬ್‌ ದಾಳಿಯ ವಿಡಿಯೊವನ್ನು ಪೋಸ್ಟ್ ಮಾಡಿದೆ.

ಭಾರತದ ಭದ್ರತಾ ಪಡೆಗಳ ಮೇಲೆ ಮಾರಣಾಂತಿಕ ದಾಳಿಗೆ ಪ್ರತಕಾರವಾಗಿ 12ದಿನಗಳಲ್ಲಿ ಭಾರತದ ರಕ್ಷಣಾ ಪಡೆಗಳಿಂದ ಭಯೋತ್ಪಾದನಾ ನಿಗ್ರಹ ವೈಮಾನಿಕ ದಾಳಿ ನಡೆಸಲಾಯಿತು. ಫೆಬ್ರವರಿ 26, 2019 ರ ಮುಂಜಾನೆ, ಭಾರತೀಯ ವಾಯುಪಡೆಯ ಹಲವಾರು ಜೆಟ್‌ಗಳು ಪಾಕಿಸ್ತಾನದ ಬಾಲಾಕೋಟ್ ಪ್ರದೇಶದಲ್ಲಿನ ಭಯೋತ್ಪಾದಕ ಶಿಬಿರದ ಮೇಲೆ ದಾಳಿ ನಡೆಸಿತು. ಭದ್ರತಾ ಪಡೆಗಳ ರೋಷಾವೇಶಕ್ಕೆ ಭಯೋತ್ಪಾದಕರು ಅಕ್ಷರಶಃ ನಡುಗಿ ಹೋಗಿದ್ದರು. ಜೈಶ್‌ ಸಂಘಟನೆಯ ಸುಮಾರು 500 ಭಯೋತ್ಪಾದಕರನ್ನು ಹತ್ಯೆಮಾಡಿತು.

ಮಿಗ್​-21 ಬೈಸನ್​ ವಿಮಾನದಲ್ಲಿ ಪಾಕ್​ ವಿಮಾನವನ್ನು ಬೆನ್ನಟ್ಟಿದ ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​, ಈ ಪ್ರಯತ್ನದಲ್ಲಿ ಯಶಸ್ವಿಯಾದರು. ಆದರೆ, ಅವರ ವಿಮಾನ ಪತನವಾಯಿತು. ಅವರು ಪ್ಯಾರಾಚೂಟ್​ ಮೂಲಕ ಇಳಿದ ಜಾಗ ಪಾಕ್​ ಆಕ್ರಮಿತ ಕಾಶ್ಮೀರ (ಪಿಒಕೆ) ವಾಗಿತ್ತು. ಅಲ್ಲಿ ಅವರನ್ನು ಬಂಧಿಸಲಾಯಿತು. ಸುಮಾರು 60 ತಾಸಿನ ನಂತರ ಅವರನ್ನು ವಾಪಸು ಕರೆತರುವ ಭಾರತದ ರಾಜತಾಂತ್ರಿಕ ಪ್ರಯತ್ನ ಲಪ್ರದವಾಯಿತು. ತನ್ನ ಧೀರಯೋಧರ ಸಾವಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕ್​ ನೆಲದೊಳಗೇ ನುಗ್ಗಿ ಸಾಹಸಗೈದಿತು. ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಯಿಲೆಬ್ಬಿಸಿದರೂ ಭಾರತ ಇದನ್ನು ಜಾಣ್ಮೆಯ ಕಾರ್ಯತಂತ್ರದಿಂದ ನಿಭಾಯಿಸಿತು.

Leave a Comment

Your email address will not be published. Required fields are marked *