ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಪ್ರೇಮಿಗಳ ದಿನವಾದ ಫೆ.14 ರಂದು ಕಾಂಗ್ರೇಸ್ ನ

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ವಿವಿಧ ಮುಖಂಡರು ಹಾಗೂ ಸಚಿವರ ವ್ಯಾಲೆಂಟೈನ್ ಡೇ ಪೋಸ್ಟ್ ರ್ ಗಳನ್ನು ಬಿಡುಗಡೆ ಮಾಡುತ್ತಿದೆ.

ಕಂದಾಯ ಸಚಿವ ಆರ್. ಅಶೋಕ್, ಸಂಸದ ತೇಜಸ್ವಿ ಸೂರ್ಯ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಭಾವಚಿತ್ರವುಳ್ಳ

ಪೋಸ್ಟರ್ ಅನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ”ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!!
ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ” ಎಂದು ವ್ಯಂಗ್ಯವಾಗಿ ಪೋಸ್ಟರ್ ನ್ನು ವೈರಲ್ ಮಾಡಿದ್ದಾರೆ.