Ad Widget .

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ‌ ಪ್ರಕರಣಕ್ಕೆ ಟ್ವಿಸ್ಟ್| ತಮಿಳುನಾಡಿನಲ್ಲಿ ಎನ್ಐಎ ನಿಂದ ಇಬ್ಬರ ಬಂಧನ

ಸಮಗ್ರ ನ್ಯೂಸ್: ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ.

Ad Widget . Ad Widget .

ಇಂದು(ಫೆ.15) ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿ ಬಳಿ ಬಂಧಿಸಿದ್ದಾರೆ.

Ad Widget . Ad Widget .

ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಶಾರೀಕ್‌ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಪ್ರಕರಣ ಸಂಬಂಧ ತಮಿಳುನಾಡು ಲಿಂಕ್‌ ಪತ್ತೆಯಾದ ಬೆನ್ನಲೆ ಇಂದು ಎನ್‌ಐಎ ದಾಳಿ ಇಬ್ಬರ ಅರೆಸ್ಟ್‌ ಮಾಡಿದ್ದಾರೆ.

Leave a Comment

Your email address will not be published. Required fields are marked *