ಸಮಗ್ರ ನ್ಯೂಸ್: ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.
ಬನಜವಾಡ ಗ್ರಾಮದ ಶ್ರೀದೇವಿ ಮಾಂಗ ಹಾಗೂ ಆಗ್ರಾಣಿ ಇಂಗಳಗಾಂವ್ ಗ್ರಾಮದ ಕಲ್ಪನಾ ಮಾದರ್ ಗಂಭೀರವಾಗಿ ಗಾಯಗೊಂಡಿದ್ದು, ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿ ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿದೆ.
ಪರಿಣಾಮ ಪಾದಚಾರಿಗಳ ಮೇಲೆ ಬಿದ್ದಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಬ್ಬರನ್ನು ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕಬ್ಬಿನಡಿ ಸಿಲುಕಿದ ಇತರರನ್ನು ಸಾರ್ವಜನಿಕರ ಸಹಾಯದಿಂದ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.