Ad Widget .

ಇಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್| ಚುನಾವಣೆ ಹೊಸ್ತಿಲಲ್ಲಿ ಭರ್ಜರಿ ‌ಕೊಡುಗೆ ನಿರೀಕ್ಷೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಫೆ.17) ರಾಜ್ಯ ಸರ್ಕಾರದ ಕೊನೆಯ ಬಜೆಟ್‌ ಅನ್ನು ಮಂಡಿಸಲಿದ್ದಾರೆ. ಏಪ್ರಿಲ್‌ ಇಲ್ಲವೇ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಅವರು ತಮ್ಮ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

Ad Widget . Ad Widget .

ಇಂದು ಬೆಳಗ್ಗೆ 10.15ಕ್ಕೆ ವಿಧಾನಮಂಡಲದಲ್ಲಿ ಸಿಎಂ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್‌ ನಲ್ಲಿ ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ.

Ad Widget . Ad Widget .

ಈ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಕೊನೆಯ ಬಜೆಟ್ ರಾಜ್ಯದ ಜನತೆಯಲ್ಲಿ ಕುತೂಹಲ ಮೂಡಿಸಿದೆ.

ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಅಥವಾ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಅನುದಾನ, ಇಲ್ಲವೇ ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡುವ ಬಗ್ಗೆ ಕೂಡ ತಿಳಿಸುವ ಸಾಧ್ಯತೆ ಇದೆ. ಗಾಣಿಗ, ಮಡಿವಾಳ, ಮೇದಾರ, ನೇಕಾರ, ಕುಂಬಾರ, ಅಕ್ಕಸಾಲಿಗ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಮಂಡಳಿ. ಗೃಹಿಣಿಯರಿಗೆ 1,500 ರೂ ಸಹಾಯಧನ ನೀಡುವ ಬಗ್ಗೆ ತಿಳಿಸುತ್ತಾರೆ ಎನ್ನಲಾಗಿದೆ. ಇದಲ್ಲದೇ ಅಂಗನವಾಡಿ ಆಶಾ ಕಾರ್ಯಕರ್ತೆಯರ ಬಹು ದಿನಗಳ ಕನಸಾದ ಸಂಬಳ ಏರಿಕೆ ಬಗ್ಗೆ ಕೂಡ ಕೂತುಹಲ ಮನೆ ಮಾಡಿದೆ.

ಸರ್ಕಾರಿ ನೌಕರರ ಪರ ಕೂಡ ರಾಜ್ಯ ಸರ್ಕಾರ ಬ್ಯಾಟ್‌ ಬೀಸುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ವರದಿ ಅನುಷ್ಠಾನ ಘೋಷಣೆಯಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಾಗಿದೆ.

Leave a Comment

Your email address will not be published. Required fields are marked *