Ad Widget .

ಕುಟುಕು ಕಾರ್ಯಾಚರಣೆ ಎಫೆಕ್ಟ್| ಬಿಸಿಸಿಐ ಗೆ ಚೇತನ್ ಶರ್ಮಾ ರಾಜೀನಾಮೆ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ, ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಈ ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅಂಗಿಕಾರ ಮಾಡಿದ್ದಾರೆ.

Ad Widget . Ad Widget .

ಖಾಸಗಿ ಚಾನೆಲ್‌ವೊಂದರ ರಹಸ್ಯ ಕಾರ್ಯಚರಣೆ ವೇಳೆ ಚೇತನ್ ಶರ್ಮಾ, ಭಾರತ ತಂಡದ ಕೆಲವು ಆಂತರಿಕ ವಿಚಾರಗಳನ್ನು ಬಹಿರಂಗಗೊಳಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.

Ad Widget . Ad Widget .

ಭಾರತ ತಂಡದ ಕೆಲ ಆಟಗಾರರು ಫಿಟ್ನೆಸ್‌ ಸಾಬೀತಿಗೆ ಇಂಜೆಕ್ಷನ್‌ ತೆಗೆದುಕೊಳ್ಳುತ್ತಾರೆ ಎಂದಿದ್ದ ಚೇತನ್‌ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ವಿರುದ್ಧವೂ ಗಂಭೀರ ಆರೋಪ ಮಾಡಿದ್ದರು. ಭಾರತ ಕ್ರಿಕೆಟ್‌ ತಂಡದೊಳಗಿನ ಹಿಂದೆಂದೂ ಕಂಡ ಕೇಳರಿಯದ ಕೆಲ ವಿಚಾರಗಳನ್ನು ಕುಟುಕು ಕಾರ್ಯಚರಣೆ ವೇಳೆ ಚೇತನ್ ಶರ್ಮಾ ಬಾಯ್ಬಿಟ್ಟಿದ್ದರು. ಇದು ಭಾರತೀಯ ಕ್ರಿಕೆಟ್‌ ವಲಯದಲ್ಲಿ ಸಂಚಲನವನ್ನೇ ಸೃಷ್ಟಿಸಿತ್ತು.

ಚೇತನ್ ಶರ್ಮಾ ಅವರ ಮೇಲೆ ನಡೆಸಲಾದ ರಹಸ್ಯ ಕಾರ್ಯಾಚರಣೆಯಿಂದಾಗಿ ಟೀಂ ಇಂಡಿಯಾದ ಇಬ್ಬರು ನಾಯಕರಾದ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಸೇರಿದಂತೆ ಆಟಗಾರ ಮೇಲಿನ ನಂಬಿಕೆ ಬಲವಾದ ಪೆಟ್ಟು ಬೀಳುವಂತೆ ಮಾಡಿತ್ತು. ಇನ್ನು ಚೇತನ್ ಶರ್ಮಾ, ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮೇಲೂ ಗಂಭೀರ ಆರೋಪ ಮಾಡಿದ್ದರು.

Leave a Comment

Your email address will not be published. Required fields are marked *