ಸಮಗ್ರ ನ್ಯೂಸ್: ಗಾಂಜಾ ಅಮಲಿನಲ್ಲಿ ಸ್ನೇಹಿತನಿಗೆ ಚೂರಿ ಇರಿದು ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ನೆಹರು ನಗರದ ನಿವಾಸಿಯಾಗಿರುವ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಚೂರಿದು ಇರಿದು ಪರಾರಿಯಾಗಿದ್ದಾನೆ.
ನಿಸಾರ್ ಕೂಡ ನೆಹರು ನಗರದ ನಿವಾಸಿಗಳಾಗಿದ್ದು, ಇಬ್ಬರೂ ಕೂಡ ಗಾಂಜ ವ್ಯಸನಿಗಳಾಗಿದ್ದರು ಎನ್ನಲಾಗಿದೆ. ಇಂದು ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆ ಇವರಿಬ್ಬರು ನೆಹರು ನಗರದ ಬಳಿ ಬಂದಿದ್ದು , ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದಿದ್ದು, ಆರೋಪಿ ನಿಸಾರ್ ಸುಲೈಮಾನ್ ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ .
ಗಾಯಗೊಂಡ ಸುಲೈಮಾನ್ ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರು ಭೇಟಿ ನೀಡಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನಿಸಾರ್ ನನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.