Ad Widget .

ಬಂಟ್ವಾಳ: ವಿದ್ಯಾರ್ಥಿಗಳಿಗೆ ಮತಾಂತರಕ್ಕೆ ಸಂಬಂಧಪಟ್ಟ ಪಾಠ|ಶೈಕ್ಷಣಿಕ ಕಾರ್ಯಾಗಾರ ನಿಲ್ಲಿಸಿದ ಹಿಂಜಾವೇ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ಅಡ್ಯನಡ್ಕ ಗ್ರಾಮದಲ್ಲಿ ಯಂಗ್ ಮೆನ್ಸ್ ಅಸೋಸಿಯೇಷನ್‌ನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ ಹೆಸರಿನಲ್ಲಿ ಮತಾಂತರಕ್ಕೆ ಸಂಬಂಧಪಟ್ಟಂತೆ ಹಲವಾರು ವಿಚಾರಗಳು ವಿವಾದಕ್ಕೆ ಕಾರಣವಾಗಿದೆ.

Ad Widget . Ad Widget .

ಶೈಕ್ಷಣಿಕ ಕಾರ್ಯಾಗಾರ ಎನ್ನುವ ಹೆಸರಿನಲ್ಲಿ ಮತಾಂತರಕ್ಕೆ ಪ್ರಚೋದನೆಯಾಗವಂತಹ ಪಾಠ ಮಾಡಲಾಗಿದೆ ಎನ್ನುವ ವಿಚಾರ ಕರಾವಳಿಯ ಗಡಿಭಾಗದಲ್ಲಿ ವಿವಾದಕ್ಕೆ ಕಾರಣವಾಗಿದೆ. ಖಾಸಗಿ ಹಾಲ್‌ನಲ್ಲಿ ಮುಸ್ಲಿಂ ಸಂಘಟನೆಯೊಂದರಿಂದ ಕಾರ್ಯಾಗಾರ ನಡೆದಿದ್ದು, ಕಾರ್ಯಾಗಾರಕ್ಕೆ ಸ್ಥಳೀಯ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳಲಾಗಿತ್ತು.

Ad Widget . Ad Widget .

ಅಲ್ಲಿ ಕೋಮುಪ್ರಚೋದನೆ ಮಾಡಿ ಮತ ಪ್ರಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ಅಲ್ಲಿಗೆ ಭೇಟಿ ನೀಡಿದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಕಾರ್ಯಾಗಾರ ನಿಲ್ಲಿಸಿದ್ದಾರೆ. ಜೊತೆಗೆ ಕಾರ್ಯಕ್ರಮ ಆಯೋಜಕರು, ಶಾಲಾ ಮುಖ್ಯಶಿಕ್ಷಕರ ಮೇಲೆ ಕೇಸ್ ದಾಖಲಿಸಿದ್ದಾರೆ.

ಇಲ್ಲಿಗೆ ಸ್ಥಳೀಯ ಜನತಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಕರೆಸಿಕೊಳ್ಳಲಾಗಿತ್ತು. ಅಲ್ಲಿ ಕೋಮು ಪ್ರಚೋದನೆ ಮಾಡಿ ಮತ ಪ್ರಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ಸ್ಥಳಕ್ಕೆ ಧಾವಿಸಿದ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ಕಾರ್ಯಾಗಾರ ನಿಲ್ಲಿಸಿದ್ದಾರೆ. ಶಾಲೆಯ ಮುಖ್ಯಶಿಕ್ಷಕರು ಕಡ್ಡಾಯವಾಗಿ ಎಲ್ಲ ವಿದ್ಯಾರ್ಥಿಗಳು ತೆರಳಲೇಬೇಕು ಎಂದು ತಾಕೀತು ಮಾಡಿ ವಿದ್ಯಾರ್ಥಿಗಳನ್ನು ಕಳಿಸಿರುವ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಘಟನೆ ಮುಖಂಡರು ದೂರು ದಾಖಲಿಸಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯ ಟಿ.ಆರ್.ನಾಯಕ್, ರಫೀಕ್ ಮಾಸ್ಟರ್ ಅತೂರು ಹಾಗೂ ನುಸ್ರುತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಷನ್ ಸಂಘಟನೆ ಮೇಲೆ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *