Ad Widget .

ಕಾರ್ಕಳ: ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರು ಗಂಭೀರ| ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ

ಸಮಗ್ರ ನ್ಯೂಸ್: ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.18ರಂದು ನಡೆದಿದೆ.

Ad Widget . Ad Widget .

ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದಾಸ್ತಾನು ಇರಿಸಿದ್ದ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಬಿದ್ದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಈ ವೇಳೆ ಗಾಯಗೊಂಡ ಬಾಲಕರು ಸುಮಾರು ಅರ್ಧ ತಾಸಿಗಿಂತಲೂ ಹೆಚ್ಚು ಹೊತ್ತು ಅಲ್ಲೇ ಇದ್ದರೂ ದೇವಸ್ಥಾನದ ಆಡಳಿತ ಮಂಡಳಿಯವರು ಅವರನ್ನು ಆಸ್ಪತ್ರೆಗೆ ಸಾಗಿಸಲು ಯಾವುದೇ ವಾಹನದ ವ್ಯವಸ್ಥೆ ಮಾಡದೇ, ಕೊನೆಗೆ ಗಾಯಾಳು ಬಾಲಕರ ಮನೆ ಮಂದಿಯೇ ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಸಾಗಿಸಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಬೃಹತ್ ಜನಸಂಖ್ಯೆ ಸೇರುವ ಜಾತ್ರಾ ಸಮಯದಲ್ಲಿ ಯಾವುದೇ ಪ್ರಥಮ ಚಿಕಿತ್ಸಾ ಕೊಠಡಿ ಅಥವಾ ಅಂಬುಲೆನ್ಸ್ ವ್ಯವಸ್ಥೆ ಕೂಡ ಮಾಡದಿರುವುದು ಆಡಳಿತ ಮಂಡಳಿಯ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಆರೋಪಿಸಲಾಗಿದೆ.

Leave a Comment

Your email address will not be published. Required fields are marked *