Ad Widget .

ಪರೇಶ್ ಮೇಸ್ತಾ ಕೊಲೆ ಗಲಭೆ ಪ್ರಕರಣ| 122 ಜನರ ಮೇಲಿನ ಕೇಸ್ ವಾಪಾಸ್

ಸಮಗ್ರ ನ್ಯೂಸ್: ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಪರೇಶ್ ಮೇಸ್ತಾ ಕೊಲೆ ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

Ad Widget . Ad Widget .

2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಸಾವು ಕಂಡಿದ್ದ. ಈ ಸಾವಿನ ಬಳಿಕ ಇಡೀ ಜಿಲ್ಲೆಯಲ್ಲಿ ಈ ಹತ್ಯೆ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು. ಇದೊಂದು ಕೊಲೆ ಎಂದು ಬಿಜೆಪಿ ಸೇರಿದಂತೆ ಬಲಪಂಥೀಯ ಸಂಘಟನೆಗಳು ಆರೋಪಿಸಿದ್ದವು. ಹತ್ಯೆ ಖಂಡಿಸಿ ಆಗಿನ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸಲಾಗಿತ್ತು. ಸದ್ಯ ಈಗ ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ 122 ಜನರ ಮೇಲಿದ್ದ ಮೂರು ಪ್ರಕರಣವನ್ನು ಹಿಂಪಡೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಈಗ ಮತ್ತೆ 112 ಜನರ ಮೇಲೆ ಉಳಿದಿದ್ದ ಮೂರು ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಅಂದಿನ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಈಗ 112 ಜನರ ಪ್ರಕರಣ ಹಿಂಪಡೆದು ಆದೇಶ ಹೊರಡಿಸಲಾಗಿದ್ದು ಸರ್ಕಾರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Comment

Your email address will not be published. Required fields are marked *