Ad Widget .

ಹಿರಿಯ ಯಕ್ಷಗಾನ ಅರ್ಥಧಾರಿ, ಸಾಹಿತಿ ಅಂಬಾತನಯ ಮುದ್ರಾಡಿ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ, ನಾಟಕಕಾರ, ಪ್ರಸಂಗಕರ್ತ, ನಿವೃತ್ತ ಪ್ರಾಧ್ಯಾಪಕ ಅಂಬಾತನಯ ಮುದ್ರಾಡಿ ಎಂದೇ ಪ್ರಸಿದ್ಧರಾಗಿದ್ದ ಕೇಶವ ಶೆಟ್ಟಿಗಾರ(85) ವಯೋಸಹಜ ಅಸೌಖ್ಯದಿಂದ ಇಂದು(ಫೆ.21) ಬೆಳಿಗ್ಗೆ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Ad Widget . Ad Widget .

ಬಹುಮುಖ ಪ್ರತಿಭೆಯ ಮುದ್ರಾಡಿ ಅವರು ಕೈಯಾಡಿಸದ ಕ್ಷೇತ್ರವಿಲ್ಲ. ವಿದ್ಯಾರ್ಥಿಗಳ ಮೆಚ್ಚಿನ ಶಿಕ್ಷಕರಾಗಿದ್ದ ಅವರು ಸಾಹಿತ್ಯ ಕ್ಷೇತ್ರದ ಎಲ್ಲ ವಿಭಾಗಗಳಲ್ಲಿ ಕೈಯಾಡಿಸಿದರೂ ಕಾವ್ಯ ಅವರಿಗೆ ವಿಶೇಷವಾಗಿ ಒಲಿದಿತ್ತು. ಯಕ್ಷಗಾನ, ನಾಟಕ, ರಂಗಗಳಲ್ಲು ಅವರು ಮಿಂಚಿದ್ದಾರೆ. ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರರಾಗಿದ್ದರೂ. ಕೊನೆಗಾಲದವರೆಗೂ ಬಹಳ ಸಕ್ರಿಯವಾಗಿ ಅವರು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

Ad Widget . Ad Widget .

ಅಂಬಾತನಯ ಮುದ್ರಾಡಿ ಅವರು 1935ರ ಜೂನ್ 4ರಂದು ಜನಿಸಿದರು. ಅವರ ಶಾಲಾ ವಿದ್ಯಾಭ್ಯಾಸ ಎಂಟನೆಯ ತರಗತಿಯವರೆಗೆ ಆದರೂ ಅವರ ಲೋಕಜ್ಞಾನ ವಿಶೇಷವಾದುದು. ಸ್ವಂತ ಆಸಕ್ತಿಯಿಂದ ಅಧ್ಯಯನ ಮಾಡಿ ಬೆಳೆದ ವ್ಯಕ್ತಿತ್ವ ಅಂಬಾತನಯರದು.

ಕಳೆದ ವಾರ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡದ್ದು ಅವರ ಕೊನೆಯ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ ‘ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ’ ಪುಸ್ತಕವನ್ನು ಪ್ರಕಟಿಸಲಾಗಿತ್ತು. ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅವರಿಗೆ ಅರ್ಹವಾಗಿ ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ.

Leave a Comment

Your email address will not be published. Required fields are marked *