Ad Widget .

ಕಡಬ: ಆಪರೇಷನ್ ಕಾಡಾನೆ ಯಶಸ್ವಿ| ನರಹಂತಕನ ಸೆರೆಹಿಡಿದ ಅಭಿಮನ್ಯು ಪಡೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ.

Ad Widget . Ad Widget .

ಫೆ.20 ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯ ನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52 ವ) ಮೃತಪಟ್ಟಿದ್ದರು. ಅಂದು ರಾತ್ರಿಯೇ
ಮೈಸೂರು ದುಬಾರೆಯಿಂದ ಅಭಿಮನ್ಯು ಸೇರಿ 5ಆನೆಗಳನ್ನು ತರಲಾಗಿದ್ದು, ಫೆ.21 ರಂದು ಡ್ರೋನ್ ಕ್ಯಾಮರಾ ಬಳಸಿ ನರಹಂತಕ ಆನೆಯನ್ನು ಪತ್ತೆ ಹಚ್ಚಿದ್ದು, ದುಬಾರೆಯ ಆನೆಗಳ ಮೂಲಕ ಸೆರೆಹಿಡಿಯುವ ಕಾರ್ಯಾಚರಣೆಯು ರೆಂಜಲಾಡಿ ಗ್ರಾಮದ ತುಂಬೆ ರಕ್ಷಿತಾರಣ್ಯದಲ್ಲಿ ಆರಂಭಗೊಂಡಿತ್ತು.

Ad Widget . Ad Widget .

ಆದರೆ ನಿನ್ನೆ ಆನೆಗೆ ಅರಿವಳಿಕೆ ನೀಡುವ ಪ್ರಯತ್ನ ವಿಫಲಗೊಂಡಿತ್ತು. ಇಂದು ಸಂಜೆ ಮತ್ತೆ ಆನೆಯನ್ನು ಪತ್ತೆ ಹಚ್ಚಿ ಅರಿವಳಿಕೆ ಮದ್ದು ಶೂಟ್ ಮಾಡಿ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *