ಸಮಗ್ರ ನ್ಯೂಸ್: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ತೊಂಡೂರು ಗ್ರಾಮದ ಹನುಮಂತಗೌಡ (55), ಲಲಿತಾ ಪಾಟೀಲ್ (50), ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ದುರ್ದೈವಿಗಳು ನಿನ್ನೆಯೇ (ಫೆ.22) ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಅದಕ್ಕಾಗಿ ಮೂವರು ಮನೆಯನ್ನು ಸಹ ತೊರೆದಿದ್ದರು ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಈ ವಿಷಯ ರಾಣೇಬೆನ್ನೂರು ಗ್ರಾಮೀಣ ಠಾಣೆಯ ಪಿಎಸ್ಐ ಮಹಾಂತೇಶ ಅವರಿಗೆ ಈ ಬಗ್ಗೆ ತಲುಪಿತ್ತು. ಸುದ್ದಿ ತಿಳಿದ ತಕ್ಷಣ ಪಿಎಸ್ಐ ಮಹಾಂತೇಶ ಅವರು ಮೂವರನ್ನು ಪತ್ತೆ ಮಾಡಿ ಮನೆಗೆ ಕಳಿಸಿಕೊಟ್ಟಿದ್ದರು. ಎಸ್ಪಿ ಅವರ ಅವರ ಸಮಯ ಪ್ರಜ್ಞೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ಮೂವರು ಸೇಫ್ ಆಗಿ ವಾಪಸ್ ಮನೆಗೆ ತಲುಪಿದ್ದರು.
ಆದರೆ, ಮನೆಗೆ ತಲುಪಿದ್ದ ಮೂವರು ಬೆಳಗಾಗುವುದರಲ್ಲಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸವಣೂರು ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೂಲಗಳ ಪ್ರಕಾರ ಸಾಲ ಮಾಡಿ ಮಗಳ ಮದುವೆ ಮಾಡಿದ್ದರು. ಹೀಗಾಗಿ ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.