ಸಮಗ್ರ ನ್ಯೂಸ್: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದ್ದು, ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ.