Ad Widget .

ವಿಧಾನಸಭಾ ಚುನಾವಣೆ| ಸುಳ್ಯ, ಪುತ್ತೂರಿನಲ್ಲಿ ಬಿಜೆಪಿಗೆ ಟಿಕೆಟ್ ಟೆನ್ಶನ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣಾ ಕಾವು ದಿನೇದಿನೇ ಜೋರಾಗುತ್ತಿದೆ. ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವುದು ಹೇಗೆ ಎನ್ನುವ ಲೆಕ್ಕಾಚಾರದಲ್ಲಿ ನಿರತವಾಗಿದೆ. ಈ ನಡುವೆ ದಕ್ಷಿಣ ಕನ್ನಡದ ಎರಡು ಪ್ರಮುಖ ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಬಿಜೆಪಿ ತಲೆಬಿಸಿ ಜೋರಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ಪುತ್ತೂರು, ಸುಳ್ಯ ಬಿಜೆಪಿಗೆ ಟಿಕೆಟ್‌ ಟೆನ್ಶನ್‌ ಶುರುವಾಗಿದೆ. ಈ ಪ್ರದೇಶದಲ್ಲಿ ಆಕಾಂಕ್ಷಿಗಳ ಪಟ್ಟಿ ಜೋರಾಗಿದ್ದು, ಇದರೊಂದಿಗೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿಯ ಹಾಲಿ ಶಾಸಕರ ವಿರುದ್ಧವೇ ಆಕ್ರೋಶ ಹೆಚ್ಚಿದೆ.

Ad Widget . Ad Widget . Ad Widget .

ಪುತ್ತೂರು, ಸುಳ್ಯದಲ್ಲಿ ಬಿಜೆಪಿ ಶಾಸಕರ ವಿರುದ್ಧ ಅಸಮಾಧಾನವಿದ್ದು, ಬಿಜೆಪಿಯ ಬದಲು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ನಾಯಕರಿಗೆ ಟಿಕೆಟ್‌ ಕೊಡುವಂತೆ ಒತ್ತಾಯ ಜೋರಾಗಿದೆ.

ಆಕಾಂಕ್ಷಿಗಳು ಹೆಚ್ಚಾದ ಹಿನ್ನಲೆಯಲ್ಲಿ ಆರ್‌ಎಸ್‌ಎಸ್‌ನಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ. ಈಗಾಗಲೇ ಸಂಘದ ವಿಸ್ತಾರಕರಿಂದ ಸಮೀಕ್ಷೆ ನಡೆಸುವಂತೆ ತಿಳಿಸಲಾಗಿದೆ. ಈ ವರದಿಯನ್ನು ಆರೆಸ್ಸೆಸ್ ಸ್ವತಃ ಹೈಕಮಾಂಡ್‌ಗೆ ನೀಡಲಿದೆ.

ಸುಳ್ಯದಲ್ಲಿ ಕಳೆದ ಆರು ಅವಧಿಯಲ್ಲಿ ಶಾಸಕರಾಗಿ‌ ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿರುವ ಎಸ್. ಅಂಗಾರರು ರಾಜಕೀಯದಿಂದ ದೂರ ಉಳಿಯುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಸಚಿವರಾಗಿದ್ದರೂ ಕ್ಷೇತ್ರದಲ್ಲಿ ಹೇಳಿಕೊಳ್ಳುವ ಕೆಲಸ ಮಾಡಿಲ್ಲ ಎಂಬುದು ಸ್ವತಃ ಬಿಜೆಪಿಗರ ಅಭಿಪ್ರಾಯವೂ ಹೌದು. ಇದೇ ಕಾರಣಕ್ಕೆ ಪಕ್ಷದಲ್ಲಿ ಅಸಮಾನತೆ ಇದೆ.

ಪುತ್ತೂರು ಕ್ಷೇತ್ರದಲ್ಲಿ ಶಾಸಕ ಸಂಜೀವ ಮಠಂದೂರು ವಿರುದ್ದ ಕಾರ್ಯಕರ್ತರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರಾದ ಬಳಿಕ ಗೆಲ್ಲಿಸಲು ಕಾರಣವಾದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂಬುದು ಅಲ್ಲಿನ ಜನರ ಅಭಿಪ್ರಾಯ. ಇದಲ್ಲದೆ ಇನ್ನೂ ಅನೇಕ ಕಾರಣಗಳಿಗೆ ಈ ಎರಡೂ ಕ್ಷೇತ್ರಗಳ ಟಿಕೆಟ್ ಹಂಚಿಕೆ ಬಿಜೆಪಿಗೆ ಇದೇ ಮೊದಲ ಬಾರಿಗೆ ಕಗ್ಗಂಟಾಗಿದೆ.

Leave a Comment

Your email address will not be published. Required fields are marked *