Ad Widget .

ಬಿರುಬಿಸಿಲಿಗೆ ಬಸವಳಿಯಲಿದೆ ಕರುನಾಡು| ದಿನೇ ದಿನೇ ತಾಪಮಾನ‌ ಏರಿಕೆ; ಮಾರ್ಚ್ ನಲ್ಲಿ ಭಾರೀ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಭಾರೀ ಬಿಸಿಲಿನ ತಾಪಕ್ಕೆ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಮಾರ್ಚ್ ಮಧ್ಯಭಾಗದಲ್ಲಿ ರಾಜ್ಯದಲ್ಲಿ ಉಷ್ಣಾಂಶ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget .

ಏಪ್ರಿಲ್‍ನಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ. ಏಪ್ರಿಲ್ ಅಥವಾ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Ad Widget . Ad Widget .

ಉತ್ತರ ಒಳನಾಡಿನ ಭಾಗದಲ್ಲಿ ಈ ಬಾರಿ ಚಳಿಯ ವಾತಾವರಣ ಹೆಚ್ಚಿತ್ತು. ಹಾಗೆಯೇ ಬೇಸಿಗೆಯ ಬಿಸಿಲಿನ ತಾಪವೂ ಹೆಚ್ಚಾಗಲಿದೆ. ಮಾರ್ಚ್ ಕೊನೆಯ ಹಾಗೂ ಏಪ್ರೀಲ್ ಆರಂಭದ ವೇಳೆಗೆ ಈ ಭಾಗದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ವರೆಗೆ ಮುಟ್ಟುವ ಸಾಧ್ಯತೆಗಳಿವೆ.

ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಬಳ್ಳಾರಿ ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಅಸುಪಾಸಿನಲ್ಲಿರುತ್ತದೆ. ಆದರೆ, ಈ ಬಾರಿ ಅದು 45-46 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಜಿಲ್ಲೆಗಳಲ್ಲಿ 36-38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಸರಾಸರಿ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಗೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೆಳಗಾವಿಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಟ 18 ಡಿಗ್ರಿ ಸೆಲ್ಸಿಯಸ್ ಇದೆ. ಗದಗ ಜಿಲ್ಲೆಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಟ 17 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಡಿಕೇರಿಯಲ್ಲಿ ಗರಿಷ್ಠ 30 ಡಿಗ್ರಿ ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *