ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 5 ಮತ್ತು 8ನೇ ತರಗತಿಯ ವಾರ್ಷಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 13ರಿಂದ 5 ಮತ್ತು 8ನೇ ತರಗತಿಯ ಪರೀಕ್ಷೆಗಳು ಆರಂಭಗೊಳ್ಳಲಿವೆ.
ದಿನಾಂಕ 06-03-2023ಯ ಸೋಮವಾರದಿಂದ ದಿನಾಂಕ 10-03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ವಿಶೇಷ ಶಾಳೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶ್ತೋತ್ತರ ಪತ್ರಿಕೆಗಳನ್ನೇ ಬಳಸಿ, ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ ನಡೆಸುವುದು ದು ತಿಳಿಸಿದೆ.
ಉಳಿದಂತೆ ಮಾ.13ರಿಂದ 18ರವರೆಗೆ ವಿಷಯವಾರು ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಪರೀಕ್ಷಾ ವೇಳಾಪಟ್ಟಿ ಕೆಳಗಿನಂತಿದೆ…