Ad Widget .

ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ| ದುಷ್ಕರ್ಮಿಗಳ ಕ್ರೌರ್ಯಕ್ಕೆ ಚೆಲ್ಲಾಪಿಲ್ಲಿಯಾದ ಜೀವಗಳು

ಸಮಗ್ರ ನ್ಯೂಸ್: ಒಂದೇ‌ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕೊಲೆಗೈದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದುಷ್ಕರ್ಮಿಗಳ ಕ್ರೌರ್ಯಕ್ಕೆ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

Ad Widget . Ad Widget .

ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ನಾಲ್ವರನ್ನೂ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ.

Ad Widget . Ad Widget .

ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರ ಧಾವಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

Leave a Comment

Your email address will not be published. Required fields are marked *