ಐಪಿಎಸ್ ಡಿ.ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವಿಚಾರಣೆಗೆ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಹಿರಿಯ ಮಹಿಳಾ ಅಧಿಕಾರಿಗಳ ಕಿತ್ತಾಟ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್‌ ಆಗಿರುವ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಇಲಾಖಾ ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget ... ..

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪಾ ಅವರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಫೋಟೋಗಳು ಸಿವಿಲ್‌ ಸೇವಾ ನಿಯಮಾವಳಿಯ ಉಲ್ಲಂಘನೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರವು ಇಲಾಖಾ ವಿಚಾರಣೆಗೆ ಸೂಚಿಸಿದೆ ಎಂದು ಮೂಲಗಳು ಹೇಳಿವೆ.

Ad Widget

ಮಹಿಳಾ ಅಧಿಕಾರಿಗಳ ಕಿತ್ತಾಟದಿಂದ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಇಬ್ಬರು ಅಧಿಕಾರಿಗಳ ಆರೋಪ- ಪ್ರತ್ಯಾರೋಪ ಸಾರ್ವಜನಿಕ ಚರ್ಚೆಗೊಳಗಾಗಿದೆ. ಅಲ್ಲದೇ, ತೀವ್ರ ಟೀಕೆಗೂ ಗುರಿಯಾಗಿದೆ. ಇಬ್ಬರ ಕಿತ್ತಾಟ ಸರ್ಕಾರವು ಮುಜುಗರಕ್ಕೊಳಗಾಗುವಂತೆ ಮಾಡಿದೆ.

ಮಾಧ್ಯಮಗಳಲ್ಲಿ ಹೇಳಿಕೆ ನೀಡುವುದರ ಜತೆಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವು ಫೋಟೋಗಳು ವೈರಲ್‌ ಆಗಿವೆ. ಇದು ಸರ್ಕಾರದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುವಂತಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಇಲಾಖೆ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *