ಬೈಕ್ – ಟ್ರಾಕ್ಟರ್ ನಡುವೆ ಅಪಘಾತ| ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: ಬೈಕ್, ಟ್ರ್ಯಾಕ್ಟರ್ ಗೆ ಡಿಕ್ಕಿಯಾದ ಪರಿಣಾಮ, ಬೈಕ್ ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಕಾರೆಹಳ್ಳಿ ಬಳಿ ನಡೆದಿದೆ.

Ad Widget ... ..

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾರೆಹಳ್ಳಿ ಬಳಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದಂತ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಲೋಕೇಶ್ ಆಚಾರಿ ಹಾಗೂ ಅವರ ಪತ್ನಿ ಲಕ್ಷ್ಮೀ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

Ad Widget

ರಸ್ತೆ ಬದಿಯಲ್ಲಿ ಟ್ರ್ಯಾಕ್ಟರ್ ನಿಂತಿದ್ದನ್ನು ಗಮನಿಸದ ಲೋಕೇಶ್ ಆಚಾರಿ, ಅದಕ್ಕೆ ಹಿಂಬದಿಯಾಗಿ ಡಿಕ್ಕಿ ಹೊಡೆದಿದ್ದಾರೆ. ಈ ಪರಿಣಾಮವಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಲೋಕೇಶ್ ಮತ್ತು ಲಕ್ಷ್ಮೀ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *