ಕಾರ್ಕಳ: ವಾಲಿಬಾಲ್ ಆಟದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು

ಸಮಗ್ರ ನ್ಯೂಸ್: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ.

Ad Widget ... ..

ಸಂತೋಷ (34) ಮೃತ ದುರ್ದೈವಿ.
ಕಳೆದ 4 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ನಿನ್ನೆ ಸಂಜೆ ಫೆ.25 ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷರವರು ಹೃದಯಘಾಟಾಗಿ ಕುಸಿದು ಬಿದ್ದಿದ್ದಾರೆ.

Ad Widget

ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Comment

Your email address will not be published. Required fields are marked *