ನಾಳೆ(ಫೆ.27) ರಾಜ್ಯಕ್ಕೆ ಮತ್ತೊಮ್ಮೆ ಪಿಎಂ ಮೋದಿ ಭೇಟಿ| ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ| ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಫೆಬ್ರವರಿ 27ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:35ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದಾರೆ.

Ad Widget ... ..

ಬೆಳಗ್ಗೆ 11:45 ರಿಂದ 11:55 ರ ವರೆಗೆ ಶಿವಮೊಗ್ಗದಲ್ಲಿ ಟರ್ಮಿನಲ್ ಬಿಲ್ಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ 1.15 ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Ad Widget

ಮಧ್ಯಾಹ್ನ 1:30 ಕ್ಕೆ ಶಿವಮೊಗ್ಗದಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 2.20 ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪ್ರಧಾನಿಯವರು ಆಗಮಿಸಲಿದ್ದಾರೆ. ಮಧ್ಯಾಹ್ನ 2.25ಕ್ಕೆ ಪ್ರಧಾನಿ ಮೋದಿ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ನಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ತೆರಳುವರು.

ಮಧ್ಯಾಹ್ನ 2.50 ರಿಂದ 3.15 ರವರೆಗೆ ಹೆಲಿಪ್ಯಾಡ್ ನಿಂದ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ಮೂಲಕ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ. 3.15 ಕ್ಕೆ ಪಿಎಂ ಕಿಸಾನ್ ಯೋಜನೆ ಫಲಾನುಭವಿ ರೈತರ ಖಾತೆಗೆ 13 ನೇ ಕಂತಿನ ಹಣ ಡಿಬಿಟಿ ಮೂಲಕ ಜಮಾ ಮಾಡಲಿದ್ದಾರೆ. ಬಳಿಕ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಮಾಡಿ ಹೆಲಿಕಾಪ್ಟರ್ ನಲ್ಲಿ ಬೆಳಗಾವಿ ಏರ್ ಪೋರ್ಟ್ ಗೆ ತೆರಳಿ ಅಲ್ಲಿಂದ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

Leave a Comment

Your email address will not be published. Required fields are marked *