Ad Widget .

ಕಡಬ: ರೆಂಜಿಲಾಡಿಯಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಕಾಡಾನೆ| ಭಯಬಿದ್ದ ಗ್ರಾಮಸ್ಥರು

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕಲ್ಲುಗುಡ್ಡೆ-ಉದನೆ ಸಂಪರ್ಕ ರಸ್ತೆಯ ನಿಡ್ಡೋ ಬಳಿಯ ಅರಣ್ಯದಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರಿಗೆ ರವಿವಾರ ಬೆಳಗ್ಗೆ ಕಾಣಿಸಿದೆ.

Ad Widget . Ad Widget .

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆ ಪತ್ತೆ ಕಾರ್ಯ ಚುರುಕುಗೊಳಿಸಿದೆ. ಅಡೆಂಜ, ಬಳಕ್ಕ, ಇಚಿಲಡ್ಕ, ನಿಡ್ಡೋ ಅರಣ್ಯ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಲಾಯಿತು.

Ad Widget . Ad Widget .

ಕಡಬ ತಾಲೂಕಿನ ರೆಂಜಿಲಾಡಿಯ ಮೀನಾಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಸ್ಥಳೀಯರ ಆಗ್ರಹದಂತೆ 5 ಸಾಕಾನೆಗಳ ನೆರವಿನಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಮೂರನೇ ದಿನದ ಕಾರ್ಯಾಚರಣೆಯಲ್ಲಿ ನರಹಂತಕ ಕಾಡಾನೆಯನ್ನು ಕೊಂಬಾರು ಬಳಿ ಸೆರೆಹಿಡಿದು ನಾಗರಹೊಳೆ ಸಾಕಾನೆ ಶಿಬಿರಕ್ಕೆ ಸಾಗಿಸಲಾಗಿದೆ. ಬಾಕಿ ಇರುವ ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

Leave a Comment

Your email address will not be published. Required fields are marked *